Home Chikkaballapur H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು

H.N. ವ್ಯಾಲಿ ಕಾಮಗಾರಿಯನ್ನು ಪರಿಶೀಲಿಸಿದ ಸಚಿವರು

0
N S Boseraju Chikkaballapur Visit

Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (Bagepalli), ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿನ ಕೆರೆಗಳಿಗೆ ಬುಧವಾರ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌ ಬೋಸರಾಜು (N S Boseraju) ಭೇಟಿ (Visit) ನೀಡಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ ಸಂಸ್ಕರಿಸಿದ ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಪ್ರಾರಂಭಿಸಲಾಗಿದ್ದು ಎಚ್‌.ಎನ್‌ ವ್ಯಾಲಿಯಿಂದ ಎರಡನೇ ಹಂತದ ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಈ ಯೋಜನೆಯ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವುದರಿಂದ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ಈ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲಾಖೆಯ ದಕ್ಷಿಣ ವಿಭಾಗದ ಸೂಪರಿಂಟೆಂಡೆಂಟ್‌ ಎಂಜಿನಿಯರ್‌ ಸಂಜೀವ್‌ ರಾಜು, ಕಾರ್ಯಪಾಲಕ ಎಂಜಿನಿಯರ್ ವಿಷ್ಣು ಕಾಮತ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!
Exit mobile version