18.9 C
Bengaluru
Wednesday, December 17, 2025

ಜೂನ್ 27 ರಂದು ಕೆಂಪೇಗೌಡ ಜಯಂತ್ಯುತ್ಸವ

- Advertisement -
- Advertisement -

Sidlaghatta : ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು (Nadaprabhu Kempegowda Jayanti) ಒಕ್ಕಲಿಗರ ಸಂಘದ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ವತಿಯಿಂದ ಅರ್ಥಪೂರ್ಣವಾಗಿ ಮತ್ತು ಭಾವಪೂರ್ಣವಾಗಿ ಜೂನ್ 27 ರ ಸೋಮವಾರ ಆಚರಿಸುವುದಾಗಿ ತಾಲ್ಲೂಕು ಒಕ್ಕಲಿಗರ ಯುವ ಸೇನೆ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ತಿಳಿಸಿದರು.

ಶಿಡ್ಲಘಟ್ಟ ನಗರದ ಒಕ್ಕಲಿಗರ ಸಂಘದ ಭವನದಲ್ಲಿ ನಡೆದ ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

ನಾಡಪ್ರಭು ಶ್ರೀಕೆಂಪೇಗೌಡರಿಗೆ ಗೌರವ ಸಲ್ಲಿಸುವುದರ ಜೊತೆಗೆ ಅವರ ತ್ಯಾಗ, ಬಲಿದಾನ, ಬೆಂಗಳೂರು ನಿರ್ಮಾಣ, ಎಲ್ಲಾ ಸಮುದಾಯದವರ ಏಳ್ಗೆಗೆ ಕೈಗೊಂಡ ಕ್ರಮಗಳು, ಒಟ್ಟಾರೆ ನಾಡನ್ನು ಅವರು ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಕಟ್ಟಿರುವ ಆದರ್ಶವನ್ನು ಮುಂದಿನ ಪೀಳಿಗೆಗೆ ತಿಳಿಸುವ ಕೆಲಸ ಮಾಡಲಿದ್ದೇವೆ. ವಿಶ್ವದಲ್ಲಿ ಮಾದರಿ ವ್ಯಕ್ತಿಗಳಲ್ಲೊಬ್ಬರಾದ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಪ್ರತಿಭಾವಂತ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರೂತ್ಸಾಹ ಧನ ನೀಡಿ ಪುರಸ್ಕರಿಸಲಾಗುವುದು ಎಂದರು.

ಕುಮಾರ ಚಂದ್ರಶೇಖರನಾಥ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಮತ್ತು ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳಾನಂದನಾಥ ಸ್ವಾಮೀಜಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಶೀರ್ವದಿಸಲಿದ್ದಾರೆ.

ಜೂನ್ 27 ರ ಸೋಮವಾರ ಬೆಳಗ್ಗೆ 10.30 ಕ್ಕೆ ಕೆಂಪೇಗೌಡರ ಪಲ್ಲಕ್ಕಿ ಮೆರವಣಿಗೆ ಆಯೋಜಿಸಲಾಗಿದೆ. ಬಸ್ ನಿಲ್ದಾಣದಿಂದ ಮೆರವಣಿಗೆ ಪ್ರಾರಂಭವಾಗಿ ದಿಬ್ಬೂರಹಳ್ಳಿ ರಸ್ತೆಯ ನ್ಯಾಯಾಲಯ ಸಂಕೀರ್ಣದ ಮುಂಭಾಗದ ರಸ್ತೆ ಬದಿಯಲ್ಲಿನ ವೇದಿಕೆಯ ಬಳಿಯ ವರೆಗೂ ನಡೆಯಲಿದೆ. ವಿವಿಧ ಗ್ರಾಮಗಳ ಪಲ್ಲಕ್ಕಿಗಳು, ಕಲಾ ತಂಡಗಳು, ವೇಷಭೂಷಣಗಳು ಮೆರವಣಿಗೆಯಲ್ಲಿ ಭಾಗವಹಿಸಲಿದೆ. ಕಾರ್ಯಕ್ರಮವನ್ನು ಪಕ್ಷಾತೀತವಾಗಿ ಅರ್ಥಪೂರ್ಣವಾಗಿ ಆಚರಿಸಲಿದ್ದೇವೆ ಎಂದರು.

ಕೆಂಪೇಗೌಡ ಜಯಂತ್ಯುತ್ಸವ ಆಚರಣಾ ಸಮಿತಿಯ ಎ.ಎಂ.ತ್ಯಾಗರಾಜ್, ಜೆ.ವಿ.ಸುರೇಶ್, ಆನೂರು ದೇವರಾಜ್, ಪುರುಷೋತ್ತಮ್, ಚೀಮನಹಳ್ಳಿ ಗೋಪಾಲ್, ಪ್ರಭು, ಸೋಣ್ಣಪ್ಪರೆಡ್ಡಿ ಹಾಜರಿದ್ದರು

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶
https://www.youtube.com/c/sidlaghatta

Website 🌐
http://www.sidlaghatta.com

📱 Join Telegram
https://t.me/Sidlaghatta

- Advertisement -
Latest news
- Advertisement -
Related news
- Advertisement -
error: Content is protected !!