Chikkaballapur : ನಂದಿಗಿರಿಧಾಮ ಅಭಿವೃದ್ಧಿ ಸಮಿತಿ ಚಿಕ್ಕಬಳ್ಳಾಪುರದ ಐತಿಹಾಸಿಕ ನಂದಿಗಿರಿಧಾಮ ಅಭಿವೃದ್ಧಿಗೆ (Nandi Hills Development Meeting) ಸಂಬಂಧಿಸಿದಂತೆ ಬುಧವಾರ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ರೋಪ್ ವೇ ಅಳವಡಿಸಲು ಗುರುತಿಸಿರುವ ಜಾಗ, ವಾಹನ ನಿಲುಗಡೆಗೆ ನಿಗದಿ ಆಗಿರುವ ಸ್ಥಳ ಹೀಗೆ ಗಿರಿಧಾಮದ ಪ್ರವೇಶದಿಂದಲೇ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದರು.
ಸಭೆಯಲ್ಲಿ ಮಾತನಾಡಿದ ಶಾಲಿನಿ ರಜನೀಶ್ “ಗಿರಿಧಾಮದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಉತ್ತೇಜಿಸಬೇಕಾಗಿದೆ. ಈ ದಿಕ್ಕಿನಲ್ಲಿ ಪರಿಸರ ಸ್ನೇಹಿಯಾಗಿ ಅಭಿವೃದ್ಧಿ ಯೋಜನೆಗಳು ಅನುಷ್ಠಾನವಾಗಬೇಕು. ಪ್ರವಾಸಿಗರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಬೇಕು. ಆ ಮೂಲಕ ಹೆಚ್ಚಿನ ಪ್ರವಾಸಿಗರು ಭೇಟಿ ನೀಡುವಂತೆ ಮಾಡಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಪ್ರವಾಸೋದ್ಯಮ ಇಲಾಖೆ ಆಯುಕ್ತ ರಾಮ್ ಪ್ರಸಾದ್ ಮನೋಹರ್, ಕಾರ್ಯದರ್ಶಿ ಸಲ್ಮಾ ಕೆ.ಫಹೀಮ್, ತೋಟಗಾರಿಕೆ ಇಲಾಖೆ ಕಾರ್ಯದರ್ಶಿ ಶಮ್ಲಾ ಇಕ್ಬಾಲ್, ಕೆಎಸ್‌ಟಿಡಿಸಿ ನಿರ್ದೇಶಕ ಜಗದೀಶ್, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯಿತಿ ಸಿಇಒ ಪ್ರಕಾಶ್ ನಿಟ್ಟಾಲಿ, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಹಾಗೂ ತೋಟಗಾರಿಕೆ, ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಪ್ರವಾಸೋದ್ಯಮ ನಿಗಮದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.