Chikkaballapur : August ನಲ್ಲಿ ಸುರಿದ ಮಳೆಗೆ ನಂದಿಗಿರಿಧಾಮದಲ್ಲಿ ರಸ್ತೆ ಕುಸಿತದಿಂದ ಸಾರ್ವಜನಿಕರಿಗೆ Nandi Hills ಪ್ರವೇಶವನ್ನು ಜಿಲ್ಲಾಢಳಿತ ನಿರ್ಬಂಧಿಸಿತ್ತು, ರಸ್ತೆ ಕಾಮಗಾರಿ ಪೂರ್ಣಗೊಂಡ ಕಾರಣ December 1 ರಿಂದ ನಂದಿಗಿರಿಧಾಮಕ್ಕೆ ಸಾರ್ವಜನಿಕರ ಪ್ರವೇಶ ದೊರೆಯಲಿದೆ ಎಂದು ಜಿಲ್ಲಾಧಿಕಾರಿ R.ಲತಾ ತಿಳಿಸಿದರು.
ಕಾಮಗಾರಿ ವೀಕ್ಷಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು “ಸಾರ್ವಜನಿಕರು ಹಾಗೂ ಪ್ರವಾಸಿಗರು ನಂದಿ ಗಿರಿಧಾಮ ಪ್ರವೇಶದ ಸಮಯದಲ್ಲಿ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು, ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಗಿರಿಧಾಮದ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದು, ಶನಿವಾರ ಮತ್ತು ಭಾನುವಾರದ ದಿನಗಳಂದು ಗಿರಿಧಾಮದ ಹೋಟೆಲ್ ಮತ್ತು ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಪ್ರವೇಶವಿರುತ್ತದೆ. ಗಿರಿಧಾಮಕ್ಕೆ ಬರುವವರೆಲ್ಲರೂ ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಿ ಸುರಕ್ಷತೆ, ಸ್ವಚ್ಛತೆ, ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಹಕರಿಸಬೇಕು ” ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ ” ಎಲ್ಲಾ ದಿನಗಳಲ್ಲಿಯೂ ನಂದಿಗಿರಿಧಾಮದಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ, ಈ ಹಿಂದೆ ನಂದಿಗಿರಿಧಾಮದಲ್ಲಿ ಜಾರಿಯಲ್ಲಿದ್ದ ಪೊಲೀಸ್ ಗಸ್ತನ್ನು December 1 ರಿಂದ ಮುಂದುವರಿಸಲಾಗುವುದು. ಗಿರಿಧಾಮದ ಪ್ರವೇಶದ್ವಾರದಲ್ಲಿಯೂ ಮೊದಲಿನಂತೆ ವಾಹನಗಳ ತಪಾಸಣೆ ನಡೆಯಲಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರಿಗೆ ವಿರುದ್ಧ ದಂಡ ವಿಧಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ” ಎಂದು ಹೇಳಿದರು.
ತಹಶೀಲ್ದಾರ್ ಗಣಪತಿಶಾಸ್ತ್ರಿ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ತಿಮ್ಮರಾಯಪ್ಪ, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಕಾಮಗಾರಿ ವೀಕ್ಷಣೆಗೆ ಬಂದಿದ್ದರು.