Kolar : ಕೋಲಾರ ನಗರದ ಡೂಂಲೈಟ್ ವೃತ್ತದಲ್ಲಿ ಸಾರ್ವಜನಿಕರಿಗೆ ಬೃಹತ್ ಪರದೆ ಮೇಲೆ ಶದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನದ ( Narendra Modi Swearing-in Ceremony) ನೇರ ಪ್ರಸಾರವನ್ನು ವೀಕ್ಷಿಸುವ ವ್ಯವಸ್ಥೆ ಮಾಡಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ (BJP JDS Celebration) ಆಚರಿಸಿದರು.
ಬಂಗಾರಪೇಟೆ :

ಬಂಗಾರಪೇಟೆ ಪಟ್ಟಣದ ಕುವೆಂಪು ವೃತ್ತದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರು ಮೋದಿ ಪರ ಘೋಷಣೆಗಳನ್ನು ಕೂಗಿ ಸಿಹಿ ಹಂಚಿ ಸಂಭ್ರಮಿಸಿದರು.
ವೇಮಗಲ್ :

ವೇಮಗಲ್‌ನಲ್ಲಿ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು ಮೋದಿ ಅವರ ಬೃಹತ್ ಕಟೌಟ್ ನಿಲ್ಲಿಸಿ ಪಟಾಕಿಗಳನ್ನು ಸಿಡಿಸಿ, ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು.