Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಜಿಲ್ಲಾಡಳಿತ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ರೈತರ ದಿನಾಚರಣೆ (National Farmers Day) ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ (N M Nagaraj) “ಕೃಷಿ ಎಲ್ಲಾ ನಾಗರಿಕತೆಗಳ ಮೂಲ ಮತ್ತು ಬೆಳವಣಿಗೆಗೆ ಕಾರಣವಾಗಿದ್ದು ವಿಜ್ಞಾನ ಮತ್ತು ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ಪ್ರತಿಯೊಬ್ಬರ ತುತ್ತಿನ ಚೀಲವನ್ನು ತುಂಬಿಸುವವನು ರೈತ ಮಾತ್ರ. ಕೋಟ್ಯಂತರ ಜನರ ಹಸಿವು ನೀಗಿಸುವ ಮಹೋನ್ನತ ಕಾರ್ಯವನ್ನು ರೈತರು ಮಾಡುತ್ತಿದ್ದಾರೆ. ಇಂತಹ ರೈತರ ಬದುಕು ಮಳೆ ಮತ್ತು ಹವಾಮಾನ ವೈಪರೀತ್ಯದಿಂದ ಅನಿಶ್ಚಿತತೆಯಿಂದ ಕೂಡಿದೆ. ಜಿಲ್ಲಾಡಳಿತ ರೈತರಿಗೆ ಬರ, ನೆರೆಹಾನಿಗೆ ಒಳಗಾದ ರೈತರಿಗೆ ಪರಿಹಾರ, ಪ್ರಾಮಾಣಿಕೃತ ಬಿತ್ತನೆ ಬೀಜಗಳು, ಪ್ರಾಮಾಣಿಕೃತ ಬಿತ್ತನೆ ಬೀಜ, ರೈತರ ಬೆಳೆಗಳಿಗೆ ವಿಮೆ ವ್ಯವಸ್ಥೆ, ರೈತ ವಿದ್ಯಾನಿಧಿ ಮೂಲಕ ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೃಷಿ ಸಾಧನೆ ಹಿನ್ನೆಲೆಯಲ್ಲಿ ನಲ್ಲರಾಳ್ಳಹಳ್ಳಿಯ ಯರ್ರಪ್ಪ, ಉದಗಿರಿನಲ್ಲಪ್ಪನಹಳ್ಳಿ ಲಕ್ಷ್ಮಮ್ಮ, ನಲ್ಲಕದಿರೇನಹಳ್ಳಿಯ ಮುರಳಿ ಮನೋಹರ್, ಸೊಪ್ಪಹಳ್ಳಿಯ ಸಾಯಿಪ್ರಶಾಂತ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಜಾವಿದಾ ನಾಸೀಮಾ ಖಾನಂ, ಜಿಲ್ಲಾ ಕೃಷಿ ಸಮಾಜದ ಅಧ್ಯಕ್ಷ ಎನ್.ನಾರಾಯಣಸ್ವಾಮಿ, ಕೃಷಿ ಇಲಾಖೆ ಉಪನಿರ್ದೇಶಕ ಎಚ್.ಎಲ್.ಚಂದ್ರ ಕುಮಾರ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಎಂ.ಗಾಯತ್ರಿ, ರೇಷ್ಮೆ ಇಲಾಖೆಯ ಉಪನಿರ್ದೇಶಕ ಆಂಜನೇಯಗೌಡ, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಶ್ರೀನಿವಾಸ್ ಮತ್ತಿತರರು ಉಪತಿತರಿದ್ದರು.
ಗುಡಿಬಂಡೆ

Gudibande : ಗುಡಿಬಂಡೆ ಪಟ್ಟಣದ ಗಜನಾಣ್ಯ ಕಲ್ಯಾಣ ಮಂಟಪದಲ್ಲಿ ಕೃಷಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಗಣ್ಯರು ಕರಪತ್ರವನ್ನು ಬಿಡುಗಡೆ ಮಾಡಿದರು.
ಶಿಡ್ಲಘಟ್ಟ
Sidlaghatta : ಶಿಡ್ಲಘಟ್ಟದ ರೇಷ್ಮೆ ಕೃಷಿ ಇಲಾಖೆ ಆವರಣದಲ್ಲಿ ರೇಷ್ಮೆ ಇಲಾಖೆ ಮತ್ತು ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ರೈತ ದಿನಾಚಾರಣೆ ಕಾರ್ಯಕ್ರಮ ಹಮ್ಮಿಕೊಳ್ಳಾಲಾಗಿತ್ತು.
ಚಿಂತಾಮಣಿ
Chintamani : ಚಿಂತಾಮಣಿ ನಗರದ ಕೃಷಿ ವಿಜ್ಞಾನ ಕೇಂದ್ರ ದತ್ತು ಗ್ರಾಮವಾಗಿ ಆಯ್ಕೆ ಮಾಡಿಕೊಂಡಿರುವ ಕೂತರಾಜನಹಳ್ಳಿಯಲ್ಲಿ ಶುಕ್ರವಾರ ರೈತ ದಿನಾಚರಣೆ ಅಂಗವಾಗಿ ಜಾನುವಾರು ತಪಾಸಣೆ ಶಿಬಿರ ಏರ್ಪಡಿಸಲಾಗಿತ್ತು.
ಗೌರಿಬಿದನೂರು
Gouribidanur : ಗೌರಿಬಿದನೂರು ತಾಲ್ಲೂಕಿನ ಮೇಳ್ಯ ಗ್ರಾಮದಲ್ಲಿ ಕೃಷಿ ಇಲಾಖೆ, ತಾಲ್ಲೂಕು ಕೃಷಿಕ ಸಮಾಜ, ಕೃಷಿ ಮತ್ತು ಕೃಷಿ ಸಂಬಂಧಿಸಿದ ಇಲಾಖೆಗಳ ನೇತೃತ್ವದಲ್ಲಿ ಶುಕ್ರವಾರ ‘ರಾಷ್ಟ್ರೀಯ ರೈತರ ದಿನಾಚರಣೆ’ ಆಯೋಜಿಸಲಾಗಿತ್ತು.