Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ವಿವಿಧ ಶಾಲೆಗಳಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ (National Science Day) ಆಚರಿಸಲಾಯಿತು. ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳಾದ ಸೌರಮಂಡಲ, ಶ್ವಾಸಕಾಂಗ, ಜೀವಕೋಶ, ವಿದ್ಯುತ್ ಮಂಡಲ, ಆಮ್ಲಗಳು, ಪ್ರತ್ಯಾಮ್ಲಗಳು ಸೇರಿದಂತೆ ಇನ್ನಿತರ ಹಲವು ಪ್ರಯೋಗಗಳನ್ನು ಮಾಡಿ ಪ್ರದರ್ಶಿಸಿದರು.
ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಇನಮಿಂಚೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಅವಲಗುರ್ಕಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಆಚರಿಸಲಾಯಿತು.
ಶಿಡ್ಲಘಟ್ಟ :
ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯನಹಳ್ಳಿಯ ನವೋದಯ ವಿದ್ಯಾಲಯ ವಸತಿ ಪ್ರೌಢಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಆಚರಿಸಲಾಯಿತು. ಶಿಡ್ಲಘಟ್ಟ ತಾಲ್ಲೂಕಿನ ಕನ್ನಮಂಗಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಯಿತು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕಿನ ಅಲೀಪುರ ಸರ್ಕಾರಿ ಪ್ರೌಢಶಾಲೆಯ ಸರ್.ಸಿ.ವಿ ರಾಮನ್ ಗ್ರಾಮೀಣ ವಿಜ್ಞಾನ ಕೇಂದ್ರದಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ನಡೆಯಿತು.
ಚಿಂತಾಮಣಿ :
ಚಿಂತಾಮಣಿ ನಗರದ ಹೊರವಲಯದ ಬೆಂಗಳೂರು ರಸ್ತೆಯಲ್ಲಿರುವ ಆರ್.ಕೆ. ವಿಷನ್ ವಿದ್ಯಾಸಂಸ್ಥೆಯಲ್ಲಿ ಬುಧವಾರ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು.