Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ (National Voters’ Day) ಯ ಪೂರ್ವಭಾವಿ ಸಭೆ (Preliminary meeting) ಸೋಮವಾರ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ “ಜನವರಿ 25 ರಂದು ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಕಡ್ಡಾಯವಾಗಿ ಮತದಾರರ ದಿನಾಚರಣೆ ಆಚರಿಸಬೇಕು. ಚಿಕ್ಕಬಳ್ಳಾಪುರ ನಗರದ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ “ಜನವರಿ 25 ರ ಮಧ್ಯಾಹ್ನ 12.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿ.ರಾಜಶೇಖರ್ ಉದ್ಘಾಟಿಸುವರು. ಕಾರ್ಯಕ್ರಮದಲ್ಲಿ ಎಲ್ಲ ಮತಗಟ್ಟೆಗಳಲ್ಲಿ ಹೊಸ ಮತದಾರರಿಗೆ EPIC Card (ಮತದಾರರ ಗುರುತಿನ ಚೀಟಿ) (Voter ID Card) ವಿತರಿಸಲು ಕ್ರಮಕೈಗೊಳ್ಳಬೇಕು. ಇದಕ್ಕೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು” ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ರಾಜ್ಯ ಮಟ್ಟದ ಇ.ಎಲ್.ಸಿ. ತರಬೇತಿದಾರ ಸತೀಶ್ ಕುಮಾರ್, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.