Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಶುಕ್ರವಾರ ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾನೂನು ಸೇವೆಗಳು ಪ್ರಾಧಿಕಾರ, ಕ್ರೀಡಾ ಇಲಾಖೆ, ನೆಹರೂ ಯುವ ಕೇಂದ್ರ ,ಶಿಕ್ಷಣ ಇಲಾಖೆ, ಗೋಲ್ಡನ್ ಗ್ಲಿಮ್ಸ್ ಕಾಲೇಜು, ರೆಡ್ ಕ್ರಾಸ್ ಸಂಸ್ಥೆ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಅವರ ಜನ್ಮದಿನದ ಅಂಗವಾಗಿ ‘ರಾಷ್ಟ್ರೀಯ ಯುವ ಸಪ್ತಾಹ ಹಾಗೂ ರಕ್ತದಾನ ಶಿಬಿರ’ (National Youth Week and Blood Donation Camp) ಹಮ್ಮಿಕೊಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ನೇರಳೆ ವೀರಭದ್ರಯ್ಯ ಭವಾನಿ “ರಕ್ತದಾನ ಮಾಡುವುದು ಗೌರವಯುತವಾದ ಸಾಮಾಜಿಕ ಸೇವಾ ಕೆಲಸ. ರಕ್ತದಾನದಿಂದ ಇನ್ನೊಬ್ಬರ ಜೀವ ಉಳಿಸಬಹುದು. ರಕ್ತದಾನ ಮಾಡಬೇಕು ಎನ್ನುವ ಆಲೋಚನೆ ಯುವಕರಲ್ಲಿ ಬರಬೇಕು” ಎಂದು ಹೇಳಿದರು.
ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ನ್ಯಾಯಾಧೀಶರಾದ ಅರುಣಾ ಕುಮಾರಿ, ಸಿ.ವಿ.ಸನತ್, ಎಚ್.ಎನ್.ಲಾವಣ್ಯ, ಮೊಹಮ್ಮದ್ ರೋಷನ್ ಷಾ, ಶ್ರುತಿ, ವಕೀಲರ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್, ಜಿಲ್ಲಾ ಸರ್ಕಾರಿ ವಕೀಲರ ಸಂಘದ ಉಪಾಧ್ಯಕ್ಷ ವಿನೋದ್ ಕುಮಾರ್, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಮುರಳಿ ಮೋಹನ್, ಗೋಲ್ಡನ್ ಗ್ಲೀಮ್ಸ್ ಕಾಲೇಜಿನ ಪ್ರಾಂಶುಪಾಲ ಸಿ.ಎಂ.ಮುನಿಕೃಷ್ಣ, ಸರ್ಕಾರಿ ವಕೀಲ ಜಯರಾಮ ರೆಡ್ಡಿ ಪಾಲ್ಗೊಂಡಿದ್ದರು.