Chikkaballapur : ಜೂನ್ 13ರಂದು ನಂದಿಕ್ರಾಸ್ (Nandhi Cross) ನ ಕೃಷ್ಣ ಕಲ್ಯಾಣ ಮಂಟಪದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ (Congress Party) ಸಂಘಟನೆ ಮತ್ತು ಸಮಸ್ಯೆಗಳ ಕುರಿತು ಚರ್ಚಿಸುವ ಸಂಬಂಧ ಜಿಲ್ಲಾ ಮಟ್ಟದ ನವಸಂಕಲ್ಪ ಶಿಬಿರ (Nava Sankalpa Shibir) ಹಮ್ಮಿಕೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ವಿ.ಎಸ್.ಉಗ್ರಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್‌ನ ಭದ್ರಕೋಟೆಯಾಗಿರುವ ಚಿಕ್ಕಬಳ್ಳಾಪುರ ಜಿಲ್ಲೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಾಗಿತ್ತು. ಈ ಬಾರಿಯೂ ಪಕ್ಷವನ್ನು ಮತ್ತಷ್ಟು ಸದೃಢಗೊಳಿಸಬೇಕು. KPCC ಅಧ್ಯಕ್ಷ, ಡಿ.ಕೆ.ಶಿವಕುಮಾರ್ (D. K. Shivakumar), ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅಥವಾ ರಾಜ್ಯ ಮಟ್ಟದ ಪ್ರಮುಖ ಮುಖಂಡರೊಬ್ಬರು ಪಾಲ್ಗೊಳ್ಳುವ ನವಸಂಕಲ್ಪ ಸಭೆಯಲ್ಲಿ 200ರಿಂದ 250 ಮಂದಿ ಕಾಂಗ್ರೆಸ್ (Congress) ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳಬೇಕು ಎಂದು ಮುಖಂಡರು ತಿಳಿಸಿದರು.
ಮಂಗಳವಾರ ದೇವನಹಳ್ಳಿ (Devanahalli) ಯಲ್ಲಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ವಿ.ಎಸ್.ಉಗ್ರಪ್ಪ (V. S. Ugrappa), ಮಾಜಿ ಸಂಸದ ವೀರಪ್ಪ ಮೊಯ್ಲಿ (Veerappa Moily), ಶಾಸಕರಾದ ವಿ.ಮುನಿಯಪ್ಪ (V. Muniyappa), ಎಚ್.ಎನ್.ಶಿವಶಂಕರರೆಡ್ಡಿ (N. H. Shivashankara Reddy), ಎಸ್.ಎನ್.ಸುಬ್ಬಾರೆಡ್ಡಿ (S.N. Subbareddy), ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಉದಯ ಶಂಕರ್, ಎನ್.ಸಂಪಂಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಕೆಪಿಸಿಸಿ ಸದಸ್ಯ ಮುನೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದರು.