Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಬಿಡಗಾನಹಳ್ಳಿ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿ (Nagarjuna Engineering College) ನಲ್ಲಿ ಮಂಗಳವಾರ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ (International Day Against Drug Abuse & Illicit Trafficking) ಅಂಗವಾಗಿ ಆರೋಗ್ಯ ಮತ್ತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಸಿ. ರಾಜಶೇಖರ್ ” ಹಲವು ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಲ್ಲಿಯೇ ಮಾದಕ ವ್ಯಸನಿ (Drug Addict) ಗಳಾಗಿ ನ್ಯಾಯಾಲಯದ ಮೆಟ್ಟಿಲು ಏರಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಹಾಗಾಗಿ ಭಾರತದ ಭವಿಷ್ಯ ನಿರ್ಮಾಪಕರಾದ ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಬೇಕು” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ.ಶಿವಶಂಕರ್, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ.ಮಿಸ್ಕಿನ್, ಡಿವೈಎಸ್‌ಪಿ ವಾಸುದೇವ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲಾಣ್ಯ ಇಲಾಖೆ ಅಧಿಕಾರಿ ಮಹೇಶ್ ಕುಮಾರ್, ರಾಜಾರೆಡ್ಡಿ, ಡಾ.ಶಿವಕುಮಾರ್, ಡಾ.ಹೇಮಂತ್ ಕುಮಾರ್, ಡಾ.ಕಿಶೋರ್, ಡಾ. ಲಾವಣ್ಯ, ಸುನೀಲ್, ಸಂಸ್ಥೆ ನಿರ್ದೇಶಕ ಗೋಪಾಲಕೃಷ್ಣ, ಪ್ರಾಂಶುಪಾಲ ಡಾ.ಬಿ.ವಿ.ರವಿಶಂಕರ್ ಉಪಸ್ಥಿತರಿದ್ದರು.