24.6 C
Bengaluru
Wednesday, February 25, 2026

ಜೂಲೈ 11ನೇ ತಾರೀಖು ಚಿಂತಾಮಣಿಗೆ ನಿಖಿಲ್ ಕುಮಾರಸ್ವಾಮಿ

- Advertisement -
- Advertisement -

Chintamani : ರಾಜ್ಯಾದ್ಯಾಂತ JDS ಪಕ್ಷವನ್ನು ಮತ್ತಷ್ಟು ಬಲಪಡಿಸಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಿವಿಧ ಭಾಗಗಳಲ್ಲಿ ಸಂಚರಿಸುತ್ತಿದ್ದು ಜೂಲೈ 11ನೇ ತಾರೀಖು ಅವರು ಚಿಂತಾಮಣಿಗೆ ಬರಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿ ನಗರದ ಜೆ.ಕೆ.ಭವನದಲ್ಲಿ ಶನಿವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ತಿಳಿಸಿದರು.

ಚಿಂತಾಮಣಿಯ ಜೆ.ಕೆ.ಭವನದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ದೊಡ್ಡ ಸಭೆ ಏರ್ಪಡಿಸಲಾಗುವುದು. ಈ ಸಭೆಯಲ್ಲಿ ಸ್ಥಳೀಯ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಬೇಕು ಎಂದು ಎಂ. ಕೃಷ್ಣಾರೆಡ್ಡಿ ಹೇಳಿದರು.

ಕಾರ್ಯಕರ್ತರ ಸಭೆಯಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬೈರೆಡ್ಡಿ, ನಗರಸಭೆ ಸದಸ್ಯ ಮುರಳಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಗುಡೇ ಶ್ರೀನಿವಾಸರೆಡ್ಡಿ ಸೇರಿದಂತೆ ಹಲವಾರು ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!