ಡಿಸೇಂಬರ್ 17 ರಂದು ಕಾಲೇಜು ಬಂದ್

- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ನಗರದ ಕಾರ್ಯನಿರತ ಪತ್ರಕರ್ತರ ಭವನದಲ್ಲಿ NSUI ಪದಾಧಿಕಾರಿಗಳು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ Dec 17 ರಂದು ನಡೆಸುತ್ತಿರುವ ಪ್ರತಿಭಟನೆ (Protest) ಕುರಿತು ಸುದ್ಧಿಗೋಷ್ಠಿ ನಡೆಸಿದರು.

ಈ ವೇಳೆ ಮಾತಾನಾಡಿದ ಎನ್‍ಎಸ್‍ಯುಐ ಜಿಲ್ಲಾ ಅಧ್ಯಕ್ಷ ಪ್ರಸನ್ನ ಕುಮಾರ್ “ಪ್ರಸ್ತುತ ಬಿಜೆಪಿ ಸರ್ಕಾರವು ಮಕ್ಕಳ ಶೈಕ್ಷಣಿಕ ಚಟುವಟಿಕೆಗಳಿಗೆ ಪೂರಕವಾಗಿದ್ದ ಸೈಕಲ್ ವಿತರಣೆ ನಿಲ್ಲಿಸಿದ್ದು ಪಠ್ಯಪುಸ್ತಕ, ಶೂ ವಿಳಂಬ ಸೇರಿ ಇತರೆ ವಿದ್ಯಾರ್ಥಿ ವಿರೋಧಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಜೀವನದೊಂದಿಗೆ ಚೆಲ್ಲಾಟವಾಡುತ್ತಾ ಶೇ 80ರಷ್ಟು ಶಾಲಾ ಕಾಲೇಜು ಮಕ್ಕಳಿಗೆ ವಿದ್ಯಾರ್ಥಿ ವೇತನ ಸಹ ನೀಡಿಲ್ಲ. ಸಕಾಲದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸುವುದು, ವಿದ್ಯಾರ್ಥಿ ವೇತನ ತಕ್ಷಣ ಬಿಡುಗಡೆಗೊಳಿಸುವುದು, ಬಸ್‍ಪಾಸ್ ವಿತರಿಸುವುದು, ಸರ್ಕಾರಿ ಕಾಲೇಜಿನ ಶುಲ್ಕ ಕಡಿಮೆ ಮಾಡುವುದು, ಶಾಲಾ ಕಾಲೇಜುಗಳಿಗೆ ತೆರಳಲು ಸಕಾಲದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಡಿಸೇಂಬರ್ 17 ರಂದು ರಾಜ್ಯದ ಎಲ್ಲ ವಿಶ್ವವಿದ್ಯಾಲಯ ಹಾಗೂ ಸಂಯೋಜಿತ ಕಾಲೇಜುಗಳನ್ನು ಬಂದ್ ಮಾಡಿ ಪ್ರತಿಭಟಿಸಲಾಗುವುದು” ಎಂದು ತಿಳಿಸಿದರು.

ಸಂಘಟನೆಯ ಉಪಾಧ್ಯಕ್ಷ ಶಿವಾನಂದ್, ಅಜಯ್, ಮದನ್‍ಮೋಹನ್, ಶಿವಕುಮಾರ್, ರಾಜು ಸುದ್ಧಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!