Sidlaghatta : ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪತ್ರಕರ್ತ ಕೆ.ಎಸ್.ರಮೇಶ್ (K S Ramesh – 36) ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಇದೇ ಜುಲೈ 23 ರ ಶನಿವಾರ ಸಂಜೆ ತಾಲ್ಲೂಕಿನ ವರದನಾಯಕನಹಳ್ಳಿ ಗೇಟ್ ಬಳಿಯಿರುವ ಅರಣ್ಯ ಇಲಾಖೆ ಮುಂಭಾಗದಲ್ಲಿ ಸಂಭವಿಸಿದ ದ್ವಿಚಕ್ರ ವಾಹನದ ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ತೀವ್ರ ಗಾಯಗೊಂಡಿದ್ದರು.
ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯನ್ನು ಗುರುವಾರ ಸಂಜೆ ಶಿಡ್ಲಘಟ್ಟದಲ್ಲಿ ನೆರವೇರಿಸಲಾಯಿತು.