Chikkaballapur : ಚಿಕ್ಕಬಳ್ಳಾಪುರ ನಗರದ ಪಂಚಾಯತ್ ರಾಜ್ ಕಚೇರಿ (Panchayat Raj Office)ಆವರಣದಲ್ಲಿ ಭಾನುವಾರ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಆಶ್ರಯದಲ್ಲಿ “ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ” ಹಾಗೂ “ನಮ್ಮ ನಡೆ ಮತಗಟ್ಟೆ ಕಡೆ” ಶೀರ್ಷಿಕೆ ಅಡಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ (Voting Awareness Program) ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ” ‘ಚುನಾವಣಾ ಪರ್ವ ದೇಶದ ಗರ್ವ’ ಎಂಬುದು ನಮ್ಮ ಧ್ಯೇಯ ವಾಕ್ಯವಾಗಬೇಕು. ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಮತದಾನದಲ್ಲಿ ಎಲ್ಲ ಅರ್ಹ ಮತದಾರರು ನಿರ್ಭಯವಾಗಿ ಹಾಗೂ ಯಾವುದೇ ಆಮಿಷಗಳಿಗೆ ಒಳಗಾಗದೆ ಪಾಲ್ಗೊಳ್ಳಬೇಕು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಟಿ ನಿಟ್ಟಾಲಿ, ಉಪ ವಿಭಾಗಾಧಿಕಾರಿ ಅಶ್ವಿನ್, ತಹಶೀಲ್ದಾರ್ ವೆಂಕಟೇಶ್, ನಗರಸಭೆ ಪೌರಾಯುಕ್ತ ಮಂಜುನಾಥ್, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಶೇಷಾದ್ರಿ, ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಮಂಜುಳಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅಂಗನವಾಡಿ,ಆಶಾ ಕಾರ್ಯಕರ್ತರು, ಸ್ಕೌಟ್ಸ್ ಅಂಡ್ ಗೈಡ್ಸ್ ಮತ್ತು ಭಾರತ್ ಸೇವಾ ದಳ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.