Chikkaballapur : ವಿಶ್ವ ಅಂಗವಿಕಲರ ದಿನಾಚರಣೆಯ (International Day of Disabled Persons) ಪ್ರಯುಕ್ತ 2023-24ನೇ ಸಾಲಿನಲ್ಲಿ ಜಿಲ್ಲಾ ಅಂಗವಿಕಲರು ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯಿಂದ ಅಂಗವಿಕಲರ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರುವ ವಿಶೇಷ ಶಿಕ್ಷಕರಿಗೆ ಪ್ರತಿ ವರ್ಷವೂ ರಾಜ್ಯ ಪ್ರಶಸ್ತಿಗಳನ್ನು (State Award) ನೀಡಿ ಗೌರವಿಸಲಾಗುತ್ತಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಂಗವಿಕಲ ಕ್ಷೇತ್ರದಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ ಶಾಲೆಗಳಲ್ಲಿ 15 ವರ್ಷಗಳಿಗೂ ಮೇಲ್ಪಟ್ಟು ಸೇವೆ ಸಲ್ಲಿಸುತ್ತಿರು ವಿಶೇಷ ಶಿಕ್ಷಕರುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ (Application). ಅರ್ಜಿಯನ್ನು ಅ.25 ರೊಳಗೆ ಸಲ್ಲಿಸಬೇಕು. ವೆಬ್‌ಸೈಟ್ www.dwdsc.kar.nic.in ಅಥವಾ ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ, ಚಿಕ್ಕಬಳ್ಳಾಪುರ, 08156-277114 ಸಂಪರ್ಕಿಸಬಹುದು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur