Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ ಹೋಬಳಿಯ ಪೆರೇಸಂದ್ರ (Peresandra) ಗ್ರಾಮದಲ್ಲಿ ಗುರುವಾರ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ (Dr K Sudhakar) ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಪೊಲೀಸ್ ಠಾಣೆಯ (New Police Station) ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಪಿ.ಎನ್.ಕೇಶವರೆಡ್ಡಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಿ.ಎನ್.ಚೆನ್ನಕೃಷ್ಣಾರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಡಿ.ವೈ.ಎಸ್.ಪಿ ವಾಸುದೇವ ಮತ್ತು ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.