Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು (Karnataka State Khadi and Village Industries Board) ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ (Prime Minister’s Employment Generation Programme (PMEGP)) ಕಾರ್ಯಕ್ರಮದಡಿ ಅರಿವು ಕಾರ್ಯಕ್ರಮ (Awareness Camp) ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ (Deputy Commissioner N M Nagaraj) “ಮಹಾತ್ಮ ಗಾಂಧೀಜಿ (Mahatma Gandhi) ಅವರು ದೇಶದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ ಎಂದಿದ್ದರು ಆದರೇ ಯುವಜನರು ಉದ್ಯೋಗಕ್ಕಾಗಿ ಪಟ್ಟಣ ನಗರಗಳತ್ತ ವಲಸೆ ಹೋಗುತ್ತೀದ್ದಾರೆ ಅದರ ಬದಲು ಸರ್ಕಾರದ ಯೋಜನೆಗಳನ್ನು ಉಪಯೋಗಿಸಿಕೊಂಡು ಸ್ವಯಂ ಉದ್ಯೋಗವನ್ನು ಪಡೆದುಕೊಂಡು ಮಹಾತ್ಮ ಗಾಂಧೀಜಿ ಅವರ ಕನಸು ನನಸಾಗಿಸಬೇಕು. ವಿದ್ಯಾಭ್ಯಾಸ ಪೂರೈಸಿದ ನಂತರ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯ ಸವಲತ್ತುಗಳನ್ನು ಪಡೆದು ಉದ್ಯೋಗಶೀಲರಾಗಬೇಕು. ಈ ಕುರಿತು ಎಲ್ಲ ಕಾಲೇಜುಗಳಲ್ಲಿ ಹಾಗೂ ಹಳ್ಳಿ ಮಟ್ಟದಲ್ಲಿ ಗ್ರಾಮೋದ್ಯೋಗ ಚಟುವಟಿಕೆಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು” ಎಂದು ತಿಳಿಸಿದರು.
ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ವಿ.ನಾಗರಾಜ್, ಖಾದಿ ಆಯೋಗದ ನಿರ್ದೇಶಕ ಡಾ.ಇ.ಮೋಹನ್ ರಾವ್, ಜಿಲ್ಲಾ ಲೀಡ್ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕ ಸುಧಾಕರ್, ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧಿಕಾರಿ ರಾಜಶೇಖರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.