Chikkaballapur : ಚಿಕ್ಕಬಳ್ಳಾಪುರ ನಗರದ ಪೊಲೀಸ್ ಸಮುದಾಯ ಭವನದಲ್ಲಿ ಬುಧವಾರ ಅಸೋಸಿಯೇಷನ್ ಆಫ್ ಸರ್ಜನ್ಸ್ ಆಫ್ ಇಂಡಿಯಾ ಚಿಕ್ಕಬಳ್ಳಾಪುರ ನಗರ ಘಟಕದಿಂದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ (Police) ಹೃದಯ ಹಾಗೂ ಶ್ವಾಸಕೋಶ ಸಂಬಂಧಿ ಕಾಯಿಲೆಗಳ ಬಗ್ಗೆ ಪೊಲೀಸರಿಗೆ ತರಬೇತಿ ನೀಡಿ ಪ್ರಥಮ ಚಿಕಿತ್ಸೆ ಹಾಗೂ Cardiopulmonary Resuscitation (CPR) ವಿಧಾನ ಕುರಿತು ತರಬೇತಿ (Training) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ” ಪೊಲೀಸರು ನಿತ್ಯ ವಿವಿಧ ಘಟನೆಗಳನ್ನು ನೋಡುತ್ತಾರೆ, ಸಿಆರ್‌ಪಿ ವಿಧಾನ ಹಾಗೂ ಪ್ರಥಮ ಚಿಕಿತ್ಸೆಯ ಜ್ಞಾನ ಹೊಂದಿರುವುದು ಅಗತ್ಯ. ಪ್ರಥಮ ಚಿಕಿತ್ಸೆ ತರಬೇತಿ ಪಡೆದಿದ್ದರೆ, ತುರ್ತು ಸಂದರ್ಭದಲ್ಲಿ ವ್ಯಕ್ತಿಯ ಜೀವ ಉಳಿಸಲು ಸಾಧ್ಯ” ಎಂದು ಹೇಳಿದರು.
ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಐ.ಆರ್.ಕಾಸಿಂ, ಡಿವೈಎಸ್‌ಪಿ ಶಿವಕುಮಾರ್ ಹಾಗೂ ಅಧಿಕಾರಿಗಳು, ಸಿಬ್ಬಂದಿ ಮತ್ತಿತರರು ಪಾಲ್ಗೊಂಡಿದ್ದರು.