Bagepalli : ಬಾಗೇಪಲ್ಲಿ ಪಟ್ಟಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ ಮತ ಕೇಂದ್ರಗಳಲ್ಲಿನ (Polling Booth) ಅಗತ್ಯ ಮೂಲ ಸೌಲಭ್ಯಗಳ ಪರಿಶೀಲನೆ (Inspection) ಕಾರ್ಯ ನಡೆಸಿದರು.
ಈ ವೇಳೆ ಸುದ್ಧಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ತಿಪ್ಪೇಸ್ವಾಮಿ “ಜಿಲ್ಲೆಯ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಮತ ಕೇಂದ್ರಗಳಲ್ಲಿನ ಅಗತ್ಯ ಮೂಲ ಸೌಲಭ್ಯಗಳ ಪರಿಶೀಲನೆ ಕಾರ್ಯ ಮಾಡಬೇಕೆಂಬ ಚುನಾವಣಾ ಆಯೋಗದ ನಿದೇರ್ಶನದಂತೆ ಈ ಕಾರ್ಯ ಮಾಡಲಾಗುತ್ತಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ 264 ಮತಗಟ್ಟೆಗಳ ಪೈಕಿ 21 ಪಟ್ಟಣ ವ್ಯಾಪ್ತಿಯಲ್ಲಿ ಮತಗಟ್ಟೆಗಳನ್ನು ಆಯ್ಕೆ ಮಾಡಲಾಗಿದ್ದು ಮತ ಕೇಂದ್ರಗಳಲ್ಲಿನ ಅಗತ್ಯ ಸೌಲಭ್ಯಗಳ ಪಟ್ಟಿಯ ವರದಿಯನ್ನು ತಹಶೀಲ್ದಾರ್ ನೀಡಿದ ಬಳಿಕ ಜಿಲ್ಲಾಧಿಕಾರಿ ಮೂಲಕ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಅಗತ್ಯ ಅನುದಾನ ನೀಡಿದ ಬಳಿಕ ಮತ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಲಾಗುವುದು” ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ತಹಶೀಲ್ದಾರ್ ವೈ.ರವಿ, ಗ್ರೇಡ್-2 ತಹಶೀಲ್ದಾರ್ ವಿ.ಸುಬ್ರಮಣ್ಯಂ, ಪುರಸಭೆ ಮುಖ್ಯಾಧಿಕಾರಿ ಕೆ.ಮಧುಕರ್, ನ್ಯಾಷನಲ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಸೋಮಶೇಖರ್, ಕಂದಾಯ ಅಧಿಕಾರಿ ವೇಣುಗೋಪಾಲ್ ಉಪಸ್ಥಿತರಿದ್ದರು.
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur