Chikkaballapur : ಚಿಕ್ಕಬಳ್ಳಾಪುರ ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ (Post Office) ಮಂಗಳವಾರ ಅಂತರರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಅಂಚೆ ಇಲಾಖೆ ಮತ್ತು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಯಿಂದ ರಕ್ತದಾನ ಶಿಬಿರ (Blood Camp) ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅಂಚೆ ಇಲಾಖೆಯ ಚಿಕ್ಕಬಳ್ಳಾಪುರ ಸೂಪರಿಂಟೆಂಡೆಂಟ್ VRL ನರಸಿಂಹರಾವ್ “ರಕ್ತ ಕೊಡುವುದರಿಂದ ಇನ್ನೊಬ್ಬರ ಜೀವ ರಕ್ಷಣೆಗೆ ಕಾರಣವಾಗುವುದಲ್ಲದ್ದೆ ನಮ್ಮ ಆರೋಗ್ಯ ಉತ್ತಮಗೊಳ್ಳಲಿದೆ. ಇದೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ಕಚೇರಿಯಲ್ಲಿ ರಕ್ತದಾನ ಶಿಬಿರವನ್ನು ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದು 38 ಯುನಿಟ್ ರಕ್ತ ಸಂಗ್ರಹವಾಗಿದೆ” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಅಂಚೆ ಇಲಾಖೆ ಇನ್‌ಸ್ಪೆಕ್ಟರ್ ಶಶಿಕುಮಾರ್, ಅಂಚೆ ಪಾಲಕ ಸಂತೋಷ್, ಉಪ ಅಂಚೆಪಾಲಕ ಚಂದ್ರಶೇಖರ್ ವಿ.ಆರ್ ಮತ್ತಿತರರು ಪಾಲ್ಗೊಂಡಿದ್ದರು.