Chikkaballapur : ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಸೋಮವಾರ ಪೌರಕಾರ್ಮಿಕರ ದಿನಾಚರಣೆ (Poura Karmik Diwas) ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪೌರಕಾರ್ಮಿಕರಿಗೆ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ” ನಗರ, ಪಟ್ಟಣಗಳ ಸೌಂದರ್ಯ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುವ ಪೌರ ಕಾರ್ಮಿಕರನ್ನು ಕಸದವರು ಎನ್ನುವ ಸಾರ್ವಜನಿಕರ ಧೋರಣೆ ಬದಲಾಗಬೇಕು, ಅವರು ಚಳಿ, ಗಾಳಿ, ಮಳೆ, ಬಿಸಿಲು ಎನ್ನದೆ ಹಗಲಿರುಳು ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗುವರು. ಪೌರಕಾರ್ಮಿಕರಿಗೆ ಲೀಡ್ ಬ್ಯಾಂಕ್ ವ್ಯವಸ್ಥಾಪಕರ ಜೊತೆ ಮಾತನಾಡಿ ಪ್ರಧಾನ ಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ ಮತ್ತು ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗುವುದು” ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ.ಕೋಡಿ ರಂಗಪ್ಪ, ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ನಗರಸಭೆ ಉಪಾಧ್ಯಕ್ಷ ನಾಗರಾಜ್, ಪೌರಾಯುಕ್ತ ಅಶ್ವಿನ್ ಕುಮಾರ್, ನಗರಸಭೆ ಸದಸ್ಯರು ಪಾಲ್ಗೊಂಡಿದ್ದರು.
ಗೌರಿಬಿದನೂರು :
ಗೌರಿಬಿದನೂರು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಸೋಮವಾರ ಪೌರ ಕಾರ್ಮಿಕರಿಗೆ ಕ್ರೀಡಾಕೂಟ ಏರ್ಪಡಿಸಲಾಗಿತ್ತು.