Chikkaballapur : ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸೋಮವಾರ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಗೆ (Primary School Teachers Protest) ಜಿಲ್ಲೆಯಿಂದ ಪ್ರಾಥಮಿಕ ಶಾಲೆಗಳ ಶಿಕ್ಷಕರು ತೆರಳಿದರು.
ಚಿಂತಾಮಣಿ :
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸೋಮವಾರ ಬೆಂಗಳೂರಿನಲ್ಲಿ ನಡೆಸುವ ಹೋರಾಟಕ್ಕೆ ಚಿಂತಾಮಣಿ ನಗರದಿಂದ ಹೊರಟ ಶಿಕ್ಷಕರ ವಾಹನಗಳಿಗೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಅಶೋಕ್ ಕುಮಾರ್ ಚಾಲನೆ ನೀಡಿದರು.