Saturday, July 27, 2024
HomeChikkaballapurಮಳೆ ಹಾನಿ ಕುರಿತು ಸರ್ಕಾರಕ್ಕೆ ಪರಿಹಾರದ ಪ್ರಸ್ತಾವ ಸಲ್ಲಿಸಿ - ಸಚಿವ ಡಾ.ಕೆ.ಸುಧಾಕರ್

ಮಳೆ ಹಾನಿ ಕುರಿತು ಸರ್ಕಾರಕ್ಕೆ ಪರಿಹಾರದ ಪ್ರಸ್ತಾವ ಸಲ್ಲಿಸಿ – ಸಚಿವ ಡಾ.ಕೆ.ಸುಧಾಕರ್

- Advertisement -
- Advertisement -
- Advertisement -
- Advertisement -

Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.

ಜಿಲ್ಲೆಯಲ್ಲಿ ಪ್ರಸಕ್ತ ವರ್ಷದಲ್ಲಿ ಬಿದ್ದ ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳಿಗೆ ಹಾನಿ ಆಗಿದೆ. ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನಷ್ಟದ ಸ್ಥಳಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ನಡಿಸಿ ನಷ್ಟದ ವಿವರಗಳನ್ನು ಸಂಗ್ರಹಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಹಣ ಮಂಜೂರು ಮಾಡಿಸಿ, ಪರಿಹಾರವನ್ನು ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮ ವಹಿಸಬೇಕು ಎಂದರು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆ, ಕೃಷಿ ಸಮ್ಮಾನ್ ಯೋಜನೆ ಮತ್ತು ಫಸಲ್ ಬಿಮಾ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ರೈತರಿಗೆ ಈ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಅಧಿಕಾರಿಗಳು ರೂಪಿಸಬೇಕು, ಜಿಲ್ಲೆಯಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ರೈತರ ಮಕ್ಕಳ ವಿವರವನ್ನು ಒಂದು ತಿಂಗಳ ಒಳಗಾಗಿ ಸಲ್ಲಿಸಬೇಕು ಎಂದು ಹೇಳಿದರು.

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ 13 ಲಕ್ಷ ಜನರನ್ನು ಜಿಲ್ಲೆಯಲ್ಲಿ ನೋಂದಾಯಿಸಬೇಕು. ಈವರೆಗೆ 2 ಲಕ್ಷ ಜನರನ್ನು ಮಾತ್ರ ನೋಂದಾಯಿಸಲಾಗಿದೆ. ಮುಂದಿನ 6 ತಿಂಗಳ ಒಳಗೆ ಉಳಿದ 11 ಲಕ್ಷ ಜನರನ್ನು ನೋಂದಾಯಿಸಬೇಕು ಎಂದು ಹೇಳಿದರು.

ಗಾಂಧಿ ಭವನ, ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನ, ದೇವರಾಜು ಅರಸು ಭವನ ಮತ್ತು ಕನಕ ಭವನ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. 2 ತಿಂಗಳ ಒಳಗಾಗಿ ಜಿಲ್ಲಾ ವಾಲ್ಮೀಕಿ ಭವನ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಬೇಕು ಎಂದರು.

ಚಿಕ್ಕಬಳ್ಳಾಪುರ ನಗರದಿಂದ ಗೌರಿಬಿದನೂರು ವರೆಗಿನ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ₹ 275 ಕೋಟಿ ಯೋಜನೆಯನ್ನು ರೂಪಿಸಿದ್ದು, ತಿಂಗಳ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಅನುಕಂಪದ ಆಧಾರದ ಮೇಲೆ ನೇಮಕವಾದ ಸರ್ಕಾರಿ ನೌಕರರಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಲಾಯಿತು.

ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಅಮರೇಶ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

- Advertisement -
RELATED ARTICLES

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
- Advertisment -

Most Popular

error: Content is protected !!