Chikkaballapur : ಚಿಕ್ಕಬಳ್ಳಾಪುರ ನಗರದ APMC ಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಅರುಣಾ ಕುಮಾರಿ ನೇತೃತ್ವದ ತಂಡ ಬುಧವಾರ ದಿಢೀರ್ ಭೇಟಿ ನೀಡಿ ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲ ಕಾರ್ಮಿಕರನ್ನು (Child Labour) ರಕ್ಷಿಸಿದೆ (Protection).
ನಂತರ ಬಾಲಕಾರ್ಮಿಕರ ಬಗ್ಗೆ ಅರಿವು ಮೂಡಿಸಿ ಕರಪತ್ರಗಳನ್ನು ಹಂಚುವ ಮೂಲಕ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಳ್ಳದಂತೆ ತಿಳಿವಳಿಕೆ ನೀಡಲಾಯಿತು.
ಜಿಲ್ಲಾ ಕಾರ್ಮಿಕ ಅಧಿಕಾರಿ ಆರ್.ವರಲಕ್ಷ್ಮಿ, ಕಾರ್ಮಿಕ ನಿರೀಕ್ಷಕಿ ಮಂಜುಳಾ, ತಹಶೀಲ್ದಾರ್ ಅನಿಲ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಮಂಜುಳಾ, ನಗರಸಭೆ ಪೌರಾಯುಕ್ತ ಮಂಜುನಾಥ್, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಅಕ್ಮಲ್ ಪಾಷ, ಮಕ್ಕಳ ಸಹಾಯವಾಣಿ ಪ್ರತಿನಿಧಿಗಳಾದ ವೆಂಕಟೇಶ್, ಅಮ್ಮಾಜಾನ್, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಿ.ಆರ್.ರಮೇಶ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.