Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾನುವಾರ ಪಲ್ಸ್ ಪೋಲಿಯೊ (Pulse Polio) ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಚಾಲನೆ ನೀಡಿದರು.
ಶಿಡ್ಲಘಟ್ಟ :
![Pulse Polio Program 2024](https://chikkaballapur.com/wp-content/uploads/2024/03/03MAR24Sd2a-1024x683.jpg)
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಆರೋಗ್ಯ ಕೇಂದ್ರದಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಭಾನುವಾರ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗೌರಿಬಿದನೂರು :
![Pulse Polio Gauribidanur 2024](https://chikkaballapur.com/wp-content/uploads/2024/03/04MarGWB-1024x683.jpg)
ಗೌರಿಬಿದನೂರು ತಾಲ್ಲೂಕಿನಾದ್ಯಂತ ನಿಗದಿಪಡಿಸಿದ್ದ ಪೋಲಿಯೊ ಬೂತ್‌ಗಳಲ್ಲಿ, ತರಬೇತಿ ಪಡೆದಿದ್ದ ಸ್ವಯಂಸೇವಕರು ಮನೆ, ಶಾಲೆ, ರಸ್ತೆ ಅಕ್ಕ ಪಕ್ಕ ಮತ್ತು ಸುತ್ತಲಿನ ಸಮುದಾಯವನ್ನು ಉತ್ಸಾಹದಿಂದ ಭೇಟಿ ಮಾಡುತ್ತಿದ್ದರು. ಬೆಳಿಗ್ಗೆಯಿಂದಲೇ ವೇಗ ಪಡೆದುಕೊಂಡ ಕಾರ್ಯಕ್ರಮದಲ್ಲಿ ತಾಯಂದಿರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಿಸಿಕೊಳ್ಳುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿ ಕಂಡುಬಂತು.
ಚೇಳೂರು :
![Pulse Polio Chelur 2024](https://chikkaballapur.com/wp-content/uploads/2024/03/04MarCHR-1024x683.jpg)
ಚೇಳೂರು ತಾಲ್ಲೂಕಿನಾದ್ಯಂತ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಭಾನುವಾರದ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿಯಾಗಿ ನಡೆಯಿತು.
ಚಿಂತಾಮಣಿ :
![Pulse Polio Chintamani](https://chikkaballapur.com/wp-content/uploads/2024/03/04MarCMY-1024x683.jpg)
ಚಿಂತಾಮಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ತಹಶೀಲ್ದಾರ್ ಸುದರ್ಶನಯಾದವ್ ಮಗುವಿಗೆ ಲಸಿಕೆ ಹಾಕಿ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಾಗೇಪಲ್ಲಿ :
![Pulse Polio Bagepalli 2024](https://chikkaballapur.com/wp-content/uploads/2024/03/04MarCBP01-1024x683.jpg)
ಬಾಗೇಪಲ್ಲಿ ಪುರಸಭೆ, ಸರ್ಕಾರಿ ಆಸ್ಪತ್ರೆ, ತಾಲ್ಲೂಕು ಪಂಚಾಯಿತಿ ಕಚೇರಿಗಳಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಸೇರಿದಂತೆ 10 ಕೇಂದ್ರಗಳಲ್ಲಿ ಲಸಿಕಾ ಕಾರ್ಯಕ್ರಮ ನಡೆಯಿತು. ಒಂದು ಸಂಚಾರ ವಾಹನದ ವ್ಯವಸ್ಥೆ ಮಾಡಲಾಗಿತ್ತು. ಭಾನುವಾರ ಬೆಳಿಗ್ಗೆ 7 ಗಂಟೆಗೆ ಸರ್ಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಕಡೆಗಳ ಲಸಿಕಾ ಕೇಂದ್ರಗಳಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಿ.ಎನ್.ಸತ್ಯನಾರಾಯಣರೆಡ್ಡಿ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿದರು.