Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಭಾರಿ ಮಳೆಯಾದ ಪರಿಣಾಮ ಅಪಾರ ಪ್ರಮಾಣದಲ್ಲಿ ಬೆಳೆ ಹಾಗೂ ಆಸ್ತಿ ನಷ್ಟವಾಗಿದೆ. ಈ ಕುರಿತು ಅಧ್ಯಯನ ನಡೆಸಿ ಸೂಕ್ತ ಪರಿಹಾರ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ (ಸಾಮೂಹಿಕ ನಾಯಕತ್ವ) ಮುಖಂಡರು ಜಿಲ್ಲಾಧಿಕಾರಿ ಆರ್.ಲತಾ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಮಳೆಗೆ ಹೆಚ್ಚು ಹಾನಿಯುಂಟಾಗಿದ್ದು ಕಳಪೆ ಕಾಮಗಾರಿಯಿಂದ ನಾಲ್ಕು ಕೆರೆಗಳು ಒಡೆದಿವೆ, ಕೆರೆ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ, ಕಂದಾಯ ಇಲಾಖೆ ಹಾಗೂ ಗ್ರಾಮಸ್ಥರನ್ನು ಒಳಗೊಂಡ ಸಮಿತಿ ರಚಿಸಿ ಈ ಕೆರೆಗಳನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡುವಂತೆ ಮನವಿ ಸಲ್ಲಿಸಿದರು.
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿ ಅತ್ತಿಗಾನಹಳ್ಳಿ ಗ್ರಾಮದಲ್ಲಿ ಬಲಾಢ್ಯರು ಅತಿಕ್ರಮಿಸಿದ್ದ ರಸ್ತೆ ಹಾಗೂ ರಾಜಕಾಲುವೆಯನ್ನು ತೆರವುಗೊಳಿಸಬೇಕು, ಆನಮಡುಗು ದಡಮಘಟ್ಟ ಅಗ್ರಹಾರ ಕೆರೆ, ಗೂರ್ಲಗುಮ್ಮನಹಳ್ಳಿ ಕೆರೆಗಳ ಬಳಿ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಹಾಗೂ ಮನೆ ಬೀಳುವ ಹಂತದಲ್ಲಿ ಇರುವವರಿಗೆ ಮನೆ ನಿರ್ಮಿಸಿಕೊಡಬೇಕು ಎಂದು ಸಂಘ ಜಿಲ್ಲಾ ಅಧ್ಯಕ್ಷ ಬಿ.ಕೆ.ಮುನಿಕೆಂಪಣ್ಣ, ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur