Chikkaballapur : ರಾಜ್ಯ ಒಕ್ಕಲಿಗರ ಸಂಘದಿಂದ (Rajya Vokkaligara Sangha) SSLC ಮತ್ತು PU ಪರೀಕ್ಷೆಯಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಿದೆ (Call for Scholarship Application). ಸರ್ಕಾರಿ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಶೇ 98 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಖಾಸಗಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ನಮೂನೆಯ ಅರ್ಜಿ ಜತೆಗೆ ಜಾತಿ ಪ್ರಮಾಣ ಪತ್ರ, ಆಯಾ ಶಾಲೆ, ಕಾಲೇಜಿನಿಂದ ದೃಢೀಕರಿಸಿರುವ ಅಂಕಪಟ್ಟಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗೆ 080-26611029 ಸಂಖ್ಯೆಗೆ ಸಂಪರ್ಕಿಸಬಹುದು.