Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಮುಸ್ಲಿಮರು ಸೋಮವಾರ ಈದ್ ಉಲ್ ಫಿತ್ರ್ (ರಂಜಾನ್) (Ramzan) ಹಬ್ಬವನ್ನು ಸಡಗರ ಮತ್ತು ಶ್ರದ್ಧಾಭಕ್ತಿಯಿಂದ ಆಚರಿಸಿ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಚಿಕ್ಕಬಳ್ಳಾಪುರ ನಗರದ ಬಿ.ಬಿ.ರಸ್ತೆಯ ಜೂನಿಯರ್ ಕಾಲೇಜ್ ಮುಂಭಾಗದ ಮಸೀದಿಯಿಂದ ಮೆರವಣಿಗೆಯ ಮೂಲಕ ಎಂ.ಜಿ.ರಸ್ತೆ ಮಾರ್ಗವಾಗಿ ಸಾಗಿ ಪ್ರಶಾಂತ್‌ನಗರದ ಈದ್ಗಾ ಮೈದಾನದಲ್ಲಿ ಒಂದೆಡೆ ಸೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬಾಗೇಪಲ್ಲಿ :

ಮುಸ್ಲಿಮರು ಪಟ್ಟಣದ ಹೊರವಲಯದ ಬಾಗೇಪಲ್ಲಿ ಈದ್ಗಾ ಮೈದಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಹಿರಿಯ ಜಾಮೀಯಾ ಮಸೀದಿ, ಕಮರ್ ಮಸೀದಿ, ಫಾರೂಕ್ ಮಸೀದಿ ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಪ್ರದೇಶದ ವಿವಿಧ ಮಸೀದಿಗಳಿಂದ ಮುಸ್ಲಿಮರು ಮೆರವಣಿಗೆಯಲ್ಲಿ ಸಂಚರಿಸಿ ನಂತರ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಚಿಂತಾಮಣಿ :

ಚಿಂತಾಮಣಿ ತಾಲ್ಲೂಕಿನಾದ್ಯಂತ ಮುಸ್ಲಿಮರು ಸೋಮವಾರ ಈದ್ ಉಲ್ ಫಿತ್ರ್ ಸಡಗರದಿಂದ ಆಚರಿಸಿದರು. ಬಾಗೇಪಲ್ಲಿ ಹಾಗೂ ಕೋಲಾರ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ನಮಾಜ್ (ಪ್ರಾರ್ಥನೆ) ಸಲ್ಲಿಸಿದರು.
ಗೌರಿಬಿದನೂರು :

ಗೌರಿಬಿದನೂರು ನಗರದ ಉಡಮಲೋಡು ಬಳಿ ಇರುವ ಈದ್ಗಾ ಮೈದಾನದಲ್ಲಿ ಪವಿತ್ರ ಈದ್ ಉಲ್ ಫಿತ್ರ್ ಪ್ರಯುಕ್ತ ಮುಸ್ಲಿಮರು ಹಮ್ಮಿಕೊಂಡಿದ್ದ ಸಾಮೂಹಿಕ ಪ್ರಾರ್ಥನೆಯಲ್ಲಿ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಪಾಲ್ಗೊಂಡಿದ್ದರು.
ಶಿಡ್ಲಘಟ್ಟ :

ಶಾಂತಿ ಮತ್ತು ಸೌಹಾರ್ದತೆ ಸಂಕೇತ, ದಾನ ಧರ್ಮದ ಪಾವಿತ್ರತೆ ಸಾರುವ ಈದ್ ಉಲ್ ಫಿತ್ರ್ ಹಬ್ಬವನ್ನು ಸಾವಿರಾರು ಮುಸ್ಲಿಮರು ಶ್ರದ್ಧೆಯಿಂದ ಆಚರಿಸಿದರು.