Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ರಾಷ್ಟ್ರೀಯ ನೇತ್ರ ಜ್ಯೋತಿ ಅಭಿಯಾನ (Rashtriya Netra Jyoti Abhiyan) ಕುರಿತ ಸಭೆಯಲ್ಲಿ ಜಿಲ್ಲಾಧಿಕಾರಿ (Deputy Commissioner) ಆರ್.ಲತಾ ರಾಷ್ಟ್ರೀಯ ನೇತ್ರ ಜ್ಯೋತಿ ಅಭಿಯಾನದ ಕುರಿತು ಅರಿವು ಮೂಡಿಸುವ ಭಿತ್ತಿಪತ್ರ ಹಾಗೂ ಕರಪತ್ರಗಳನ್ನು ಬಿಡುಗಡೆಗೊಳಿಸಿದರು
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿಗಳು “ಜೂನ್ ತಿಂಗಳ ಕೊನೆ ವಾರದಲ್ಲಿ ರಾಷ್ಟ್ರೀಯ ನೇತ್ರ ಜ್ಯೋತಿ ಅಭಿಯಾನ ಮತ್ತು ‘ನಮ್ಮ ದೃಷ್ಟಿ ನಮ್ಮ ಕರ್ನಾಟಕ’ ಕಾರ್ಯಕ್ರಮದ ಪ್ರಯುಕ್ತ ಜಿಲ್ಲೆಯ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಉಚಿತವಾಗಿ ಕಣ್ಣಿನ ತಪಾಸಣೆ (Eye Checkup) ಮಾಡಲಾಗುತ್ತದ್ದು ದೃಷ್ಟಿ ದೋಷ ಇರುವವರು ಕೂಡಲೇ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕು. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲು ಶಕ್ತಿಯಿಲ್ಲದ ವ್ಯಕ್ತಿಗಳ ವಿವರಗಳನ್ನು ಪಡೆದು ತಪಾಸಣೆ ಮಾಡಿಸಬೇಕು. ಅಧಿಕಾರಿಗಳು ಸೂಕ್ತ ಚಿಕಿತ್ಸೆ ಅಗತ್ಯವಿದ್ದಲ್ಲಿ ಶಸ್ತ್ರಚಿಕಿತ್ಸೆಗೆ ಜಿಲ್ಲಾ ಕೇಂದ್ರಕ್ಕೆ ಕಳುಹಿಸಬೇಕು” ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರುದ್ರಮೂರ್ತಿ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ, ವೈದ್ಯ ಡಾ.ಶಿವಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.