Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ 75ನೇ ಗಣರಾಜ್ಯೋತ್ಸವವನ್ನು (Republic Day) ಶಾಲೆಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಚಿಕ್ಕಬಳ್ಳಾಪುರ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ರಾಷ್ಟ್ರ ಧ್ವಜಾರೋಹಣ ನಡೆಸಿದರು. ಚಿಕ್ಕಬಳ್ಳಾಪುರ ನಗರದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ಜಿಲ್ಲಾ ಘಟಕದ ಸದಸ್ಯರು ಬೈಕ್ ರ‍್ಯಾಲಿ ನಡೆಸುವ ಮೂಲಕ ಜನತಾ ಗಣರಾಜ್ಯೋತ್ಸವ ಆಚರಿಸಿದರು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕು ಆಡಳಿತ ನಗರದ ನೇತಾಜಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡ ಧ್ವಜ ವಂದನೆ ಸ್ವೀಕರಿಸಿದರು.
ಶಿಡ್ಲಘಟ್ಟ :
ಶಿಡ್ಲಘಟ್ಟ ನಗರದ ನೆಹರೂ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಶುಕ್ರವಾರ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಪಾಲ್ಗೊಂಡು ಧ್ವಜಾರೋಹಣ ನೆರೆವೇರಿಸಿದರು.
ಚೇಳೂರು :
ಚೇಳೂರು ಪಟ್ಟಣದ ಹೊರವಲಯದ ತಾಲ್ಲೂಕು ಕಚೇರಿಯ ಆವರಣದ ಬಳಿ ಡಾ.ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಅವರ ಭಾವಚಿತ್ರದ ಪೂಜೆಯೊಂದಿಗೆ ಗ್ರೇಡ್–2 ತಹಶೀಲ್ದಾರ್ ಸುಬ್ರಹ್ಮಣ್ಯಂ ಅವರು ಸಿಬ್ಬಂದಿ ಮತ್ತು ಗ್ರಾಮಸ್ಥರೊಂದಿಗೆ ಧ್ವಜಾರೋಹಣವನ್ನು ನೆರವೇರಿಸಿದರು.
ಚಿಂತಾಮಣಿ :
ಚಿಂತಾಮಣಿ ಗಣರಾಜ್ಯೋತ್ಸವ ಅಂಗವಾಗಿ 2,200 ಅಡಿಗಳ ರಾಷ್ಟಧ್ವಜವನ್ನು ಸುಮಾರು ನಾಲ್ಕು ಸಾವಿರ ಮಂದಿ ವಿದ್ಯಾರ್ಥಿಗಳ ಮತ್ತು ಸಾರ್ವಜನಿಕರ ಮೆರವಣೆಗೆಯ ಮೂಲಕ ಪ್ರದರ್ಶಿಸಿದರು.