Chikkaballapur : ಚಿಕ್ಕಬಳ್ಳಾಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ 76ನೇ ಗಣರಾಜ್ಯೋತ್ಸವ ದಿನವನ್ನು (Republic Day) ಸಾರ್ವಜನಿಕರು ಸಂಭ್ರಮ ಸಡಗರದಿಂದ ಆಚರಿಸಿದರು.

ಚಿಕ್ಕಬಳ್ಳಾಪುರ ನಗರದ ಸರ್.ಎಂ. ವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಧ್ವಜಾರೋಹಣ ನೆರವೇರಿಸಿದರು.
ಬಾಗೇಪಲ್ಲಿ :

ಬಾಗೇಪಲ್ಲಿ ಪಟ್ಟಣದ ಬಾಲಕಿಯರ ಶಾಲಾವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಭಾನುವಾರ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಮನೀಷಾ ಎನ್. ಪತ್ರಿ ಗೌರವ ವಂದನೆ ಸ್ವೀಕರಿಸಿದರು.
ಗುಡಿಬಂಡೆ :

ಗುಡಿಬಂಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಡೆದ 76ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.
ಗೌರಿಬಿದನೂರು :

ಗೌರಿಬಿದನೂರು ನಗರದ ನೇತಾಜಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಅವರು ಧ್ವಜಾರೋಹಣ ನೆರವೇರಿಸಿದರು.
ಶಿಡ್ಲಘಟ್ಟ :

ಶಿಡ್ಲಘಟ್ಟ ನಗರದ ನೆಹರು ಕ್ರೀಡಾಂಗಣದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವದಲ್ಲಿ ಶಾಸಕ ಬಿ.ಎನ್.ರವಿಕುಮಾರ್ ಭಾಗವಹಿಸಿದರು.
ಚಿಂತಾಮಣಿ :

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯು ನಗರದ ಝಾನ್ಸಿರಾಣಿ ಲಕ್ಷ್ಮೀಬಾಯಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಣರಾಜ್ಯೋತ್ಸವದಲ್ಲಿ ತಹಶೀಲ್ದಾರ್ ಸುದರ್ಶನ ಯಾದವ್ ಗೌರವ ವಂದನೆ ಸ್ವೀಕರಿಸಿದರು.