Home News Chikkaballapur ‘ಸಖಿ’ ಸಾಂತ್ವನ ಕೇಂದ್ರ ಪ್ರಾರಂಭ

‘ಸಖಿ’ ಸಾಂತ್ವನ ಕೇಂದ್ರ ಪ್ರಾರಂಭ

0
Sakhi Center Inaugration By Dr K Sudhakar In Chikkaballapur

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಬುಧವಾರ ‘ಸಖಿ’ ಸಾಂತ್ವನ ಕೇಂದ್ರ (Sakhi Center) ಪ್ರಾರಂಭಿಸಲಾಯಿತು. (Inaugration)

ಸಚಿವ ಡಾ.ಕೆ.ಸುಧಾಕರ್ (K Sudhakar) ನಗರದ ಹಳೇ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ‘ಸಖಿ ಒನ್ ಸ್ಟಾಪ್ ಕೇಂದ್ರ’ ಮತ್ತು ಡ್ರೀಮ್ ಸಿಟಿ ಲೇಔಟ್ ನಲ್ಲಿ ಬಾಲಕಿಯರ ಸರ್ಕಾರಿ ಬಾಲಮಂದಿರ ನೂತನ ಕಟ್ಟಡ ಹಾಗೂ ‘ಸಖಿ’ ಸಾಂತ್ವನ ಕೇಂದ್ರವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ, ಜಿಲ್ಲಾಧಿಕಾರಿ ಎನ್.ಎಂ.ನಾಗರಾಜು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕಿ ಅಶ್ವತ್ಥಮ್ಮ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version