17.5 C
Bengaluru
Friday, November 22, 2024

ಸಂಜೀವಿನಿ ಮಾಸಿಕ ಸಂತೆ ಪ್ರದರ್ಶನ ಹಾಗೂ ಮಾರಾಟ

- Advertisement -
- Advertisement -

Sidlaghatta : ಶಿಡ್ಲಘಟ್ಟ ನಗರದ ಸಂತೆ ಮೈದಾನದಲ್ಲಿ ಸೋಮವಾರ ಕರ್ನಾಟಕ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಇಲಾಖೆ ಮತ್ತು ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಹಯೋಗದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿರುವ ಉತ್ಪನ್ನಗಳ ಮಾರಾಟ ಮೇಳ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಡವರಿಗೆ ಬಡತನದಿಂದ ಪಾರಾಗುವ ಅಪೇಕ್ಷೆ ಇದೆ. ಬಡವರ ಸಹಜ ಸಾಮರ್ಥ್ಯಗಳನ್ನು ಅನಾವರಣಗೊಳಿಸಲು, ಸಾಮಾಜಿಕ ಸಜ್ಜುಗೊಳಿಸುವಿಕೆ ಮತ್ತು ಬೆಂಬಲಿಸುವ ಸಂಸ್ಥೆಗಳು ಅವಶ್ಯಕ. ಬಡ ಕುಟುಂಬಗಳಿಗೆ ಲಾಭದಾಯಕ ಸ್ವ-ಉದ್ಯೋಗ ಮತ್ತು ಕೌಶಲ್ಯಪೂರ್ಣ ವೇತನ ಉದ್ಯೋಗಾವಕಾಶಗಳನ್ನು ಅನುವು ಮಾಡಿಕೊಡುವ ಮೂಲಕ ಬಡತನವನ್ನು ಕಡಿಮೆ ಮಾಡಬಹುದು. ಬಡವರ ಪರವಾದ ್ಸಂಸ್ಥೆಗಳನ್ನು ನಿರ್ಮಿಸುವ ಮೂಲಕ ಸುಸ್ಥಿರ ಆಧಾರದ ಮೇಲೆ ಅವರ ಜೀವನೋಪಾಯದಲ್ಲಿ ಗಮನಾರ್ಹ ಸುಧಾರಣೆಯನ್ನು ಉಂಟುಮಾಡುತ್ತದೆ ಎಂದರು.

ಗ್ರಾಮೀಣ ಮಹಿಳೆಯರ ಬದುಕಿನ ದಿಕ್ಕನ್ನು ಬದಲಾಯಿಸುವಲ್ಲಿ ಹಾಗೂ ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶವನ್ನಿರಿಸಿಕೊಂಡಿರುವ ಸ್ವಸಹಾಯ ಸಂಘಗಳು ಗ್ರಾಮಗಳ ಉದ್ಧಾರ ಮಾಡಿವೆ. ಅದೇ ರೀತಿಯಾಗಿ ಸ್ವಾವಲಂಬನೆಯ ಜೀವನಕ್ಕೆ ಅಡಿಪಾಯ ಹಾಕುತ್ತ ಬೆಳೆಯಬೇಕು ಎಂದರು.

ನಗರದ ಸಂತೆ ಮೈದಾನದಲ್ಲಿ ಸಂಜೀವಿನಿ ಮಾಸಿಕ ಸಂತೆ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳಲ್ಲಿ ಸ್ವ-ಸಹಾಯ ಸಂಘದವರು ತಯಾರಿಸುವ ಉತ್ಪನ್ನಗಳನ್ನು ಮಾರಾಟ ಮಳಿಗೆಗಳಲ್ಲಿ ಇಡಲಾಗಿತ್ತು.

ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ, ನಗರಸಭೆ ಪೌರಾಯುಕ್ತ ಶ್ರೀಕಾಂತ್, ಅಧ್ಯಕ್ಷೆ ಸುಮಿತ್ರಾ ರಮೇಶ್, ಸದಸ್ಯ ಸುರೇಶ್, ಜ್ಞಾನೋದಯ ಗ್ರಾಮೀಣ ವಿದ್ಯಾ ಟ್ರಸ್ಟ್ ಸಂಸ್ಥೆಯ ಜಿಲ್ಲಾ ಸಂಯೋಜಕಿ ಲತಾ, ಎನ್ ಆರ್ ಎಲ್ ಎಂ ಸಿಬ್ಬಂದಿ ಬಾಲರಾಜ, ನರಸಿಂಹ, ನಳಿನಿ, ಭಾಗ್ಯಲಕ್ಷ್ಮಿ, ಅಮರಾವತಿ ಮತ್ತು ತಾಲ್ಲೂಕಿನ ಎಲ್ಲಾ ಎಂ.ಬಿ.ಕೆ ಮತ್ತು ಎಲ್ ಸಿ ಆರ್ ಪಿ ಗಳು, ಕೃಷಿ ಸಖಿಗಳು, ಪಶು ಸಖಿಗಳು, ವನ ಸಖಿಗಳು, ಕೃಷಿ ಉದ್ಯೋಗ ಸಖಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!