Home News JDS ನವರು ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

JDS ನವರು ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ : ಮುಖ್ಯಮಂತ್ರಿ ಸಿದ್ದರಾಮಯ್ಯ

0
Kolar Lokasabha Election Siddaramaih Road Show Bangarpete

Bangarpet : ಬಂಗಾರಪೇಟೆ ಪಟ್ಟಣದಲ್ಲಿ ಭಾನುವಾರ ಕೋಲಾರ ಲೋಕಸಭೆ ಕ್ಷೇತ್ರದ (Kolar Lokasabha Election) ಕಾಂಗ್ರೆಸ್‌ ಅಭ್ಯರ್ಥಿ ಕೆ.ವಿ.ಗೌತಮ್‌ ಪರ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ ರೋಡ್‌ ಶೋ (Siddaramaih Road show) ನಡೆಸಿ ಮತಯಾಚಿಸಿದರು.

ಈ ಸಂಧರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ” ಬಿಜೆಪಿ ಹಾಗೂ ಜೆಡಿಎಸ್‌ನದ್ದು ಅಪವಿತ್ರ ಮೈತ್ರಿ. ಜೆಡಿಎಸ್‌ನವರು ಕೋಮುವಾದಿಗಳ ಜೊತೆ ಸೇರಿಕೊಂಡಿದ್ದಾರೆ. ‌ಇವರಿಗೆ ನಾಚಿಕೆ, ಮಾನ, ಮರ್ಯಾದೆ ಇದೆಯೇ. 15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸಕ್ಕೆ ಮೋದಿ ಅವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ, ಈ ಚೊಂಬು ತಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15 ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯಪಾತ್ರೆಯಿಂದ ಉದುರಿಸಿ ನೋಡೋಣ. ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಘೋಷಿಸಿದ್ದ ದೇವೇಗೌಡರು ಈಗ ಮೋದಿ ಮತ್ತು ತಾವು ಭಾಯಿ ಭಾಯಿ ಎನ್ನುತ್ತಿದ್ದಾರೆ.” ಎಂದು ಟೀಕಿಸಿದರು.

ಸಚಿವ ಬೈರತಿ ಸುರೇಶ್, ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಶಾಸಕ ಕೊತ್ತೂರು ಮಂಜುನಾಥ್, ಅಭ್ಯರ್ಥಿ ಕೆ.ವಿ.ಗೌತಮ್‌, ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version