Home News Chikkaballapur ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ

0
Siddarameshwara Jayanti Chikkaballapur

Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಸೋಮವಾರ ‘ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ’ (Siddarameshwara Jayanti)ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ “ಅನುಭವ ಮಂಟಪ ಸ್ಥಾಪನೆಗೆ ಶ್ರಮಿಸಿದವರಲ್ಲಿ ಶಿವಯೋಗಿ ಸಿದ್ಧರಾಮೇಶ್ವರರು ಸಹ ಪ್ರಮುಖರಾಗಿದ್ದು 1,250ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಅಲ್ಲಮಪ್ರಭು ಮತ್ತು ಬಸವಣ್ಣ ಅವರ ರೀತಿಯಲ್ಲಿ ಜನಮಾನಸದಲ್ಲಿ ಉಳಿದಿದ್ದಾರೆ. ಒಂದೊಂದು ಸಮುದಾಯಕ್ಕೆ ಒಂದೊಂದು ಕಲೆ ಒಲಿದಿದೆ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಕಲ್ಲು ಕೆಲಸವನ್ನು ಮಾಡಲು ಸ್ಥಳ ಮೀಸಲಿಡುವ ಪ್ರಯತ್ನ ಮಾಡುತ್ತಿದ್ದೇವೆ. ಈ ಕೆಲಸವನ್ನು ಮಾಡಿಕೊಂಡು ಇರುವ ಕುಟುಂಬಗಳಿಗೆ ಅನುಕೂಲವಾಗುವ ರೀತಿಯಲ್ಲಿ ಜಿಲ್ಲಾಡಳಿತ ಕ್ರಮಕೈಗೊಳ್ಳುತ್ತದೆ” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಭೋವಿ ಸಂಘದ ಮುಖಂಡ ಎಂ.ವಿ ಕೃಷ್ಣಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಮನೀಷ, ಜಿಲ್ಲಾ ಭೋವಿ ಮಹಾಸಭಾ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡ ಕೆ.ವಿ. ವಿಜಯ್ ಕುಮಾರ್, ವಿ.ಕೆ.ಮೂರ್ತಿ, ಗುರಪ್ಪ, ವೆಂಕಟರಮಣಪ್ಪ, ಎಲ್ಲಪ್ಪ, ಸಿ.ವೆಂಕಟರಮಣಪ್ಪ ಹಾಗೂ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version