Sidlaghatta : ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಭಾನುವಾರ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 133ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನದ ಹಕ್ಕು ಮತ್ತು ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ ಬೋಧಿಸಿದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಮೇಲೂರು ಮಂಜುನಾಥ್, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಭಕ್ತರಹಳ್ಳಿ ಬಿ.ಎಂ.ವಿ ವಿದ್ಯಾಸಂಸ್ಥೆ
ಮಹಾ ಮಾನವತಾವಾದಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ರವರ 133ನೇ ದಿನಾಚರಣೆ ಯನ್ನು ಭಕ್ತರಹಳ್ಳಿ ಬಿ.ಎಂ.ವಿ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಆಚರಿಸಲಾಯಿತು.
ಭೀಮರಾವ್ ಅಂಬೇಡ್ಕರ್ ರವರ ಸಮಗ್ರ ಬರಹಗಳು ಮತ್ತು ಭಾಷಣಗಳುಳ್ಳ 20 ಸಂಪುಟಗಳು ಮತ್ತು ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಬರೆದಿರುವ “ಸಂವಿಧಾನ ಓದು” ಪುಸ್ತಕಗಳ ನಡುವೆ ಅಂಬೇಡ್ಕರ್ ಭಾವಚಿತ್ರ ಮತ್ತು ಬುದ್ದನ ಪುತ್ಥಳಿ ಇಟ್ಟು ಪುಷ್ಪ ನಮನ ಸಲ್ಲಿಸಲಾಯಿತು.
ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ, “ಶಿಕ್ಷಕರು ಅಂಬೇಡ್ಕರ್ ರವರ ಸಮಗ್ರ ಬರಹಗಳನ್ನು ಓದಿ ಮಕ್ಕಳಿಗೆ ತಿಳಿಸಬೇಕು. ನಮ್ಮ ತಿಳಿವಳಿಕೆಯನ್ನು ಹೆಚ್ಚಿಸುವ, ಹೃದಯ ವೈಶಾಲ್ಯತೆಯನ್ನು ಹಿಗ್ಗಿಸುವ ಅಂಬೇಡ್ಕರ್ ಬರಹಗಳು ಸಮಾಜಮುಖಿ ಚಿಂತನೆಗಳನ್ನು ಮನಸ್ಸಿನಲ್ಲಿ ಬೇರೂರಿಸುತ್ತವೆ ಎಂದು ಹೇಳಿ, ಸಂವಿದಾನ ಪೀಠಿಕೆ ಯನ್ನು ಬೋದಿಸಿ, ಸಂವಿಧಾನದ ನಿರ್ದೇಶಕ ತತ್ವಗಳ ಸಾರಾಂಶಗಳನ್ನು ವಿವರಿಸಿದರು. ಇದೇ ಸಂದರ್ಭದಲ್ಲಿ ಬಾಬು ಜಗಜೀವನ್ ರಾಮ್ ಅವರನ್ನೂ ಸ್ಮರಿಸಲಾಯಿತು .
ಮುಖ್ಯೋಪಾಧ್ಯಾಯರಾದ ಎನ್. ಪಂಚಮೂರ್ತಿ ಮತ್ತು ಎನ್. ವೆಂಕಟಮೂರ್ತಿ ಹಾಗೂ ಶಿಕ್ಷಕರು ಹಾಜರಿದ್ದರು.
ಮೇಲೂರು
ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮ ಪಂಚಾಯಿತಿಯಲ್ಲಿ ಭಾನುವಾರ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.