22.1 C
Bengaluru
Sunday, March 1, 2026

ಅಪರಿಚಿತ ವಾಹನ ಡಿಕ್ಕಿ : ಬೈಕ್ ಸವಾರ ಸಾವು

- Advertisement -
- Advertisement -

Sidlaghatta : ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬಸವಾಪಟ್ಟಣ ಗೇಟ್ ಬಳಿ ಶುಕ್ರವಾರ ರಾತ್ರಿ ನಡೆದಿದೆ.

ತಾಲ್ಲೂಕಿನ ಮಳಮಾಚನಹಳ್ಳಿ ಗೋವಿಂದಪ್ಪ (50) ಮೃತ ದುರ್ದೈವಿ ಎನ್ನಲಾಗಿದೆ.

ಮೃತ ಗೋವಿಂದಪ್ಪ ಶುಕ್ರವಾರ ರಾತ್ರಿ ಸುಮಾರು 8 ಗಂಟೆ ಸಮಯದಲ್ಲಿ ಜಂಗಮಕೋಟೆ ಕಡೆಯಿಂದ ಮಳಮಾಚನಹಳ್ಳಿ ಗ್ರಾಮಕ್ಕೆ ತಮ್ಮ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತ ಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಶ್ರೀನಿವಾಸ್ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!