Sidlaghatta : ವಿದ್ಯುತ್ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಸಭೆಯನ್ನು ಶಿಡ್ಲಘಟ್ಟ ನಗರದ ಬೆವಿಕಂ ಕಚೇರಿಯಲ್ಲಿ ಡಿ 21 ರ ಶನಿವಾರ ಹಮ್ಮಿಕೊಳ್ಳಲಾಗಿದೆ ಎಂದು BESCOM ಗ್ರಾಮಾಂತರ ಎಇಇ ಬಿ.ಪ್ರಭು ತಿಳಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯುವ ಗ್ರಾಹಕರ ಸಂವಾದ ಸಭೆ ಮತ್ತು ವಿದ್ಯುತ್ ಸುರಕ್ಷತೆಯ ಸಭೆಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು-ಉಪಾಧ್ಯಕ್ಷರು,ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ರೈತ ಸಂಘಟನೆಗಳ ಪದಾಧಿಕಾರಿಗಳು, ನಗರಸಭೆಯ ಸದಸ್ಯರು ಹಾಗೂ ಬೆಸ್ಕಾಂ ಗ್ರಾಹಕರು ಭಾಗವಹಿಸಿ ವಿದ್ಯುತ್ ಗೆ ಸಂಬಂಧಿಸಿದ ದೂರುಗಳಿದ್ದಲ್ಲಿ ನೀಡಿ ಪರಿಹಾರವನ್ನು ಕಂಡುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.