Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಾಚಹಳ್ಳಿ ಗೇಟ್ ಬಳಿಯಿರುವ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗು ಬೆಂಗಳೂರು ಉತ್ತರ ವಿವಿ ಹಾಗು ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಕ್ತಧಾನ ಶಿಬಿರದಲ್ಲಿ (Blood Donation Camp) ಭಾಗವಹಿಸಿ ಪ್ರಾಂಶುಪಾಲ ಕೆ.ಸುರೇಶ್ ಮಾತನಾಡಿದರು.
ಅಪಘಾತಗಳಂತಹ ತುರ್ತು ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇದ್ದು ದಾನಿಗಳಿಂದ ಸಂಗ್ರಹವಾದ ರಕ್ತ ಮತ್ತೊಬ್ಬರ ಜೀವ ರಕ್ಷಣೆ ಮಾಡಲಿದೆ. ಕೋವಿಡ್ 19 ರ ಹಿನ್ನಲೆಯಲ್ಲಿ ರಕ್ತಧಾನಿಗಳ ಕೊರತೆಯಿಂದ ರಕ್ತದ ಅವಶ್ಯಕತೆ ಹೆಚ್ಚಿದ್ದು ಪ್ರತಿಯೊಬ್ಬ ಆರೋಗ್ಯವಂತ ಯುವಕರು ರಕ್ತದಾನ ಮಾಡಲು ಮುಂದಾಗಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಡಾ.ಹೇಮಂತ್‌ರಾಜ್, ರೆಡ್ ಕ್ರಾಸ್ ಸಂಸ್ಥೆಯ ವರದರಾಜ್, ರವಿಕುಮಾರ್. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಜಿ.ಎಂ.ಚಂದ್ರಕುಮಾರ್, ದೈಹಿಕ ಶಿಕ್ಷಣ ನಿರ್ದೇಶಕ ಎ.ಪ್ರಸನ್ನ ಕುಮಾರ್ ಹಾಜರಿದ್ದರು.
For Daily Updates WhatsApp ‘HI’ to 7406303366
Follow Chikkaballapur District News
Facebook: https://www.facebook.com/hicbpur
Twitter: https://twitter.com/hicbpur