- Advertisement -
- Advertisement -
- Advertisement -
- Advertisement -
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಾರಡಿ ಸಮೀಪ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು (Car Bike Accident), ಬೈಕ್ ಸವಾರ ಸಿದ್ದಾರ್ಥ ನಗರ ವಾಸಿ ಸಾಬೀರ್(30) ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿಡ್ಲಘಟ್ಟದಿಂದ ಎಚ್.ಕ್ರಾಸ್ ಕಡೆ ಹೊರಟಿದ್ದ ಬೈಕ್ ಮತ್ತು ಎದುರಿನಿಂದ ಬಂದ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ನ ಹಿಂಬದಿ ಕುಳಿತು ಪ್ರಯಾಣ ಮಾಡುತ್ತಿದ್ದ ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಶಿಡ್ಲಘಟ್ಟ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
For Daily Updates WhatsApp ‘HI’ to 7406303366
- Advertisement -