Cheemangala, Sidlaghatta : ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ವತಿಯಿಂದ 44ನೇ ವರ್ಷದ ರೈತ ಹುತಾತ್ಮ ದಿನಾಚರಣೆಯನ್ನು ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು.
ಸಾಮೂಹಿಕ ನಾಯಕತ್ವದ ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳಿಗೆ 44 ನೆಯ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸುತ್ತಿರುವುದರ ಕಾರಣ ವಿವರಿಸಿ, ಈ ವೇಳೆ ರೈತ ಮುಖಂಡರು ಮಹದಾಯಿ ಜಾರಿಗೆ ಒತ್ತಾಯಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ ದಿನ ಎಂದು ಹೇಳಿ, ಆದರೆ ಇಂದಿಗೂ ನಮ್ಮ ಈ ಭಾಗದ ರೈತರ ಭೂಮಿಗಳಿಗೆ ಇನ್ನೂ ನೀರು ಬಂದಿಲ್ಲ. ಮಹದಾಯಿ ಹೆಸರಿನ ಮೇಲೆ ಜನಪ್ರತಿನಿಧಿಗಳು ರಾಜಕೀಯ ಮಾಡುತ್ತಿರುವುದು ದುರಂತವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ. ಎನ್. ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್ ರವರು ಶಾಲಾ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಸಂಚಾರಿ ನಿಯಮಗಳು, ದುಶ್ಚಟಗಳ ಬಗ್ಗೆ ಅರಿವು ಮೂಡಿಸಿದರು.
ಹೆಚ್ಚಿನ ಅಂಕ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.
ಸಾಮೂಹಿಕ ನಾಯಕತ್ವದ ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ತಾಲ್ಲೂಕು ಅಧ್ಯಕ್ಷ ಎ. ಎನ್. ಮುನೇಗೌಡ, ಕಾರ್ಯದರ್ಶಿ ನವೀನಾಚಾರಿ, ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ಕದಿರೇಗೌಡ, ಕಾರ್ಯದರ್ಶಿ ಆಂಜಿನಪ್ಪ, ಬೈರಗಾನಹಳ್ಳಿ ಬಿ.ವಿ.ಮಂಜುನಾಥ್, ಬಳುವನಹಳ್ಳಿ ಪ್ರಕಾಶ್, ಯಣ್ಣೂರು ದೇವಪ್ಪ, ಸುಂಡ್ರಹಳ್ಳಿ ಪಾಪಣ್ಣ, ಅರಕೆರೆ ಮುನಿರಾಜ್ ಹಾಜರಿದ್ದರು.