26.3 C
Bengaluru
Wednesday, February 18, 2026

ಗ್ಯಾರೆಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ – Congress ಅಭ್ಯರ್ಥಿ

- Advertisement -
- Advertisement -

Sidlaghatta : Congress ಪಕ್ಷ ನೀಡಿರುವ ಅವಕಾಶದಿಂದ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದು, ಎಲ್ಲಾ ನಾಯಕರ ಸಹಕಾರ ಸಿಕ್ಕಿರುವುದರಿಂದ ಕಾಂಗ್ರೆಸ್‌ಗೆ ಗೆಲುವು ಸಿಗಲಿದೆ ಎಂದುಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಹಂಡಿಗನಾಳದಲ್ಲಿ ಬುಧವಾರ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಅವರ ಮನೆಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ನಾನು ರಾಜಕೀಯ ಹಿನ್ನೆಲೆಯಿಂದ ಬಂದವನು. ನಮ್ಮ ತಂದೆ ಕೂಡ ಸಾಕಷ್ಟು ಪಕ್ಷಕ್ಕಾಗಿ ದುಡಿದಿದ್ದಾರೆ. ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದ ನನ್ನನ್ನು ಗುರುತಿಸಿ ಕೋಲಾರ ಮೀಸಲು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಿರುವ ಎಲ್ಲಾ ರಾಜ್ಯ ಮಟ್ಟದ ನಾಯಕರಿಗೆ ಅಭಾರಿಯಾಗಿದ್ದೇನೆ. ಪಕ್ಷದಲ್ಲಿನ ಕೆಲವು ಬಿನ್ನಾಭಿಪ್ರಾಯಗಳಿಂದ ನನಗೆ ಬಯಸದೇ ಬಂದಿರುವ ಭಾಗ್ಯವಿದು. ಶಿಡ್ಲಘಟ್ಟ ಕ್ಷೇತ್ರದ ಮುಖಂಡರಾದ ಮಾಜಿ ಸಚಿವ ವಿ.ಮುನಿಯಪ್ಪ ರವರ ಮಾರ್ಗದರ್ಶನದಲ್ಲಿ ಈ ಚನಾವಣೆಯನ್ನು ಎದುರಿಸುವೆನು. ಕೇವಲ 20 ದಿನಗಳು ಬಾಕಿ ಉಳಿದ್ದಿದ್ದು ತಾವೆಲ್ಲರೂ ಒಗ್ಗಟ್ಟಿನಿಂದ ಬೂತ್ ಮಟ್ಟದಲ್ಲಿ ಕೆಲಸ ಮಾಡಿ. ಕಾಂಗ್ರೆಸ್ ನ ಐದು ಗ್ಯಾರೆಂಟಿಗಳನ್ನು ಮನೆಮನೆಗೆ ತಲುಪಿಸುವ ಮೂಲಕ ಮತಗಳನ್ನಾಗಿ ಪರಿವರ್ತಿಸಿ, ಆರ್ಶೀವಾದ ಮಾಡುವ ಮೂಲಕ ನನಗೆ ನಿಮ್ಮ ಸೇವೆ ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಪುಟ್ಟು ಆಂಜಿನಪ್ಪ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಮುಖ್ಯ ಧ್ಯೇಯ ಮತ್ತು ಗುರಿಯಾಗಿದೆ. ಪ್ರತಿಯೊಬ್ಬ ಕಾರ್ಯಕರ್ತರೂ ಹಗಲೂ ಇರುಳೂ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ಮುಖಂಡರಾದ ಪುಟ್ಟು ಆಂಜಿನಪ್ಪ , ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ , ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಭ್ರಮಣಿ , ಯಾಸ್ಮೀನ್ ತಾಜ್ , ಬೆಳ್ಳೂಟಿ ಸಂತೋಷ್ , ಗೋಪಿ , ರಾಜ್ ಕುಮಾರ್ , ದೇವರಾಜ್, ಸಾದಿಕ್ , ಗುಡಿ ಹಳ್ಳಿ ಚಂದ್ರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!