Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿನ ತಮ್ಮ ನಿವಾಸದಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಹಂಡಿಗನಾಳ ಗ್ರಾಮದಿಂದಲೇ ಅನ್‌ಲೈನ್ ಮೂಲಕ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆಯಂತೆ ಕಾಂಗ್ರೆಸ್ ಪಕ್ಷವನ್ನು ಮುಂದಿನ ವಿಧಾನಸಭೆ ಚುನಾವಣೆಗೆ ಸಜ್ಜುಗೊಳಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ಪಕ್ಷದಲ್ಲಿನ ನೂನ್ಯತೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ಮತ್ತು ಪಕ್ಷದ ಚಟುವಟಿಕೆಗಳನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಅನ್‌ಲೈನ್ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಪಕ್ಷದ ಎಲ್ಲ ಕಾರ‍್ಯಕರ್ತರು, ಯುವಕರು ಆನ್‌ಲೈನ್‌ನಲ್ಲೆ ತಮ್ಮ ಹೆಸರನ್ನು ನೋಂದಾಯಿಸುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಡಾ.ಎಂ.ಶಶಿಧರ್ ಮಾತನಾಡಿ, ಡಿ.ಕೆ.ಶಿವಕುಮಾರ್ ರವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ತಳಮಟ್ಟದಿಂದ ಕಾರ‍್ಯಕರ್ತರನ್ನು ಸಂಘಟಿಸುವ ಸಲುವಾಗಿ ಸದಸ್ಯತ್ವ ನೋಂದಣಿಯನ್ನು ಆರಂಭಿಸಲಾಗಿದೆ ಎಂದರು.
ಸಮಾಜ ಸೇವೆ ಮಾಡಲು ಎಲ್ಲಾ ಕಡೆ ಬರುತ್ತಿದ್ದಾರೆ, ಅವರ ಸಮಾಜ ಸೇವೆಗೆ ನಮ್ಮ ಅಭ್ಯಂತರವಿಲ್ಲ. ಆದರೆ ಮುಂದೆ ಅವರ ನಡೆ ನುಡಿ ಬದಲಾಗಬಾರದು, ಹೃದಯ ಪೂರ್ವಕವಾಗಿ ಜನತೆಗೆ ಸಹಾಯ ಮಾಡುವವರಿಗೆ ನಾವು ಯಾವಾಗಲೂ ಸ್ವಾಗತ ಕೋರುತ್ತೇವೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷದಲ್ಲಿ ಹೈಕಮಾಂಡ್ ಇದ್ದು ಅವರು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡುತ್ತಾರೆ. ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸಿಕೊಂಡು ಹೋಗುವವರು ಯಾರು ಎಂದು ಅವರದೆ ಆದ ಲೆಕ್ಕಾಚಾರದ ಮೇಲೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ಚುನಾವಣೆ ಪೂರ್ವದಲ್ಲಿ ನಾಯಿಕೊಡೆಗಳಂತೆ ಬರುವವರು ಎಷ್ಟು ದಿನ ಉಳಿದುಕೊಳ್ಳುತಾರೆ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಮಾಜಿ ಅದ್ಯಕ್ಷ ವಿ.ಸುಬ್ರಹ್ಮಣಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ‍್ಯದರ್ಶಿ ಎಲ್.ಮಧುಸೂಧನ್, ನಗರಸಭೆ ಸದಸ್ಯ ಅನಿಲ್ ಕುಮಾರ್, ಮುತ್ತೂರು ವೆಂಕಟೇಶ್, ನರಸಿಂಹಮೂರ್ತಿ, ನಾಗನರಸಿಂಹ ಹಾಜರಿದ್ದರು.
Facebook: https://www.facebook.com/hicbpur
Twitter: https://twitter.com/hicbpur
Your email address will not be published. Required fields are marked *
Save my name, email, and website in this browser for the next time I comment.
2021 Chikkaballapur.com