Home Sidlaghatta ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪವಿತ್ರ ಆಯ್ಕೆ

ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾಗಿ ಪವಿತ್ರ ಆಯ್ಕೆ

0

Devaramallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಪವಿತ್ರ ಅವರು ಜಯಶಾಲಿಯಾಗಿದ್ದಾರೆ.

ಒಟ್ಟು 16 ಸದಸ್ಯ ಬಲವಿರುವ ದೇವರಮಳ್ಳೂರು ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು ಆಗಿದ್ದು, ಶುಕ್ರವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಈ ಹಿನ್ನಲೆಯಲ್ಲಿ ಜೆಡಿಎಸ್ ಬೆಂಬಲಿತ ಪವಿತ್ರ ಮತ್ತು ಕಾಂಗ್ರೆಸ್ ಬೆಂಬಲಿತ ಸುಗುಣಮ್ಮ ನಾಮಪತ್ರ ಸಲ್ಲಿಸಿದ್ದರು.

ಚುನಾವಣೆಯಲ್ಲಿ ಪವಿತ್ರ ಅವರು 9 ಮತಗಳನ್ನು ಪಡೆದರೆ, ಸುಗುಣಮ್ಮ 7 ಮತಗಳನ್ನೇ ಪಡೆದು ಸೋಲು ಕಂಡರು. ಈ ಹಿನ್ನೆಲೆಯಲ್ಲಿ ಪವಿತ್ರ ಅವರನ್ನು ಚುನಾವಣೆ ಅಧಿಕಾರಿಯಾದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್ ಅಧ್ಯಕ್ಷರಾಗಿ ಘೋಷಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ಸುಧಾಮಣಿ, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

Save progress on every phone.

Name, email, photo only. No password. By continuing you agree to the Terms and Privacy Notice.

error: Content is protected !!
Exit mobile version