Sidlaghatta : ರಾಷ್ಟ್ರೀಯ ಆವಿಷ್ಕಾರ ಅಭಿಯಾನ ಯೋಜನೆಯಡಿ ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಧನುಷ್ ಶ್ರೇಷ್ಠ ಸಾಧನೆ ತೋರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಆನ್‌ಲೈನ್ ಮೂಲಕ ನೊಂದಾಯಿಸಿಕೊಂಡ ವಿದ್ಯಾರ್ಥಿಗಳಿಗೆ ತಾಲ್ಲೂಕು, ಜಿಲ್ಲಾ ಮತ್ತು ವಿಭಾಗ ಮಟ್ಟದಲ್ಲಿ ಸ್ಪರ್ಧೆ ನಡೆಸಲಾಗಿದ್ದು, ಎಲ್ಲ ಹಂತಗಳಲ್ಲಿ ಧನುಷ್ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಅಂತಿಮವಾಗಿ, ವಿಭಾಗ ಮಟ್ಟದಲ್ಲಿ ಶ್ರೇಷ್ಟ ಅಂಕ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಪ್ರವೇಶ ಪಡೆದಿದ್ದಾರೆ.
ಈ ಯಶಸ್ಸಿಗೆ ಖುಷಿಯಾಗಿರುವ ಧನುಷ್ ಅವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ.ನರೇಂದ್ರಕುಮಾರ್, ಬಿ.ಆರ್.ಪಿ ಕೆ.ಮಂಜುನಾಥ್, ಆರ್.ವೇಣುಮಾಧವಿ, ಸಿ.ಆರ್.ಪಿ ರಮೇಶ್‌ಕುಮಾರ್, ಮುಖ್ಯಶಿಕ್ಷಕಿ ಮಂಜುಳಮ್ಮ, ಮಾರ್ಗದರ್ಶಿ ಶಿಕ್ಷಕ ಮುರಳಿಮೋಹನ್ ಹಾಗೂ ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ ಸೇರಿದಂತೆ ಹಲವಾರು ಶಿಕ್ಷಕರು ಅಭಿನಂದಿಸಿದರು.