28.9 C
Bengaluru
Wednesday, February 18, 2026

ನಾವೆಲ್ಲರೂ ಸಂವಿಧಾನವನ್ನು ಗೌರವಿಸಬೇಕು, ಪಾಲಿಸಬೇಕು

- Advertisement -
- Advertisement -

Sidlaghatta : ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ನಾವೆಲ್ಲರೂ ನಮ್ಮ ಸಂವಿಧಾನವನ್ನು ಗೌರವಿಸಬೇಕು, ಪಾಲಿಸಬೇಕು. ಆಗಲೆ ನಾವೆಲ್ಲರೂ ಉತ್ತಮ ಪ್ರಜೆಗಳಾಗಿ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ವಚನ ಸಾಹಿತ್ಯ ಪರಿಷತ್‌ ನ ರಾಜ್ಯಾಧ್ಯಕ್ಷ ಎಂ.ವಿ.ತ್ಯಾಗರಾಜ್ ಅಭಿಪ್ರಾಯಪಟ್ಟರು.

ನಗರದಲ್ಲಿನ ಡಾಲ್ಫಿನ್ ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಶಾಲಾ ಕಾಲೇಜು ಮಕ್ಕಳಿಂದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಭಾರತ ಮಾತೆ, ಮಹಾತ್ಮಗಾಂಧೀಜಿ, ನೆಹರೂ, ಲಾಲ್ ಬಹುದ್ದೂರ್ ಶಾಸ್ತ್ರಿ ಇನ್ನಿತರೆ ಮಹನೀಯರ ವೇಷ ಭೂಷಣಗಳು ಗಮನ ಸೆಳೆದವು.

ಡಾಲ್ಫಿನ್ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಎ.ನಾಗರಾಜ್, ಆಡಳಿತಾಧಿಕಾರಿ ಚಂದನ, ವ್ಯವಸ್ಥಾಪಕ ನಿರ್ದೇಶಕ ಅಶೋಕ್, ಕಾರ್ಯದರ್ಶಿ ಕೃಷ್ಣಪ್ಪ, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು, ಪೋಷಕರು ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!