Home Sidlaghatta ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಪತ್ತುಗಳ ಸಹಾಯವಾಣಿ ಕೇಂದ್ರ

ಕುಡಿಯುವ ನೀರು ಪೂರೈಕೆ ಮತ್ತು ಪ್ರಾಕೃತಿಕ ವಿಪತ್ತುಗಳ ಸಹಾಯವಾಣಿ ಕೇಂದ್ರ

0
167

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕುಡಿಯುವ ನೀರು ಪೂರೈಕೆ ಮಾಡಲು ಮತ್ತು ಮಳೆ ಸಹಿತ ಪ್ರಾಕೃತಿಕ ವಿಪತ್ತುಗಳ ಮಾಹಿತಿ ನೀಡಲು 24*7 ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ ಎಂದು ತಹಶೀಲ್ದಾರ್ ಬಿ.ಎನ್.ಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಾಲ್ಲೂಕಿನಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು ಮಳೆಯಿಂದ ಯಾವುದೇ ರೀತಿಯ ಅನಾಹುತ ಸಂಭವಿಸಿದರೂ ಸಹ ಸಾರ್ವಜನಿಕರ ಮಾಹಿತಿಗಾಗಿ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ದೂರವಾಣಿ ಸಂಖ್ಯೆ 08158-256764 ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮಾಡಿದರು.

ತಾಲ್ಲೂಕಿನ 11 ಗ್ರಾಮಗಳು ಹಾಗೂ ನಗರದ ವಿವಿಧ ವಾರ್ಡುಗಳಿಗೆ ಎಂಟು ಕೊಳವೆಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಎಲ್ಲಿಯೂ ಸಹ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ತಾಲ್ಲೂಕಿನಲ್ಲಿ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಿರ್ದೇಶನದಂತೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಸರ್ಕಾರವು ಸಹ ಫ್ರೂಟ್ ತಂತ್ರಾಂಶದಲ್ಲಿ ನೊಂದಣಿಯಾಗಿರುವ ರೈತರ ಖಾತೆಗಳಿಗೆ ನೇರವಾಗಿ ಬರ ಪರಿಹಾರದ ಹಣವನ್ನು ಜಮೆ ಮಾಡುವ ಕೆಲಸವನ್ನು ಮಾಡುತ್ತಿದೆ ಕೆಲವೊಂದು ತಾಂತ್ರಿಕ ದೋಷಗಳನ್ನು ನಿವಾರಿಸಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು.

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ ಸಂಬಂಧಿಸಿದಂತೆ ಈಗಾಗಲೇ ನೀತಿ ಸಂಹಿತೆ ಜಾರಿಯಲ್ಲಿದ್ದು ಕ್ಷೇತ್ರದ ಗಡಿಗೆ ಹೊಂದಿಕೊಂಡಿರುವ ಚಿಲಕಲನೇರ್ಪು ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಚುನಾವಣೆಗೆ ಸಂಬಂಧಿಸಿದಂತೆ ರಾಜಕೀಯ ಸಭೆ ಸಮಾರಂಭ ನಡೆಸಲು ಪೂರ್ವ ಅನುಮತಿಯನ್ನು ಪಡೆಯಲು ರಾಜಕೀಯ ಮುಖಂಡರುಗಳಿಗೆ ಸೂಚನೆ ಸಹ ನೀಡಲಾಗಿದೆ ಎಂದರು.

For Daily Updates WhatsApp ‘HI’ to 7406303366

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!