24.3 C
Bengaluru
Sunday, December 8, 2024

ಪ್ರಾಣವಾದ್ರೂ ಬಿಡ್ತೇವೆ, ಜಮೀನು ಕೊಡಲ್ಲ : ಉಸ್ತುವಾರಿ ಸಚಿವರ ವಿರುದ್ಧ ಸಿಡಿದ ರೈತರು

- Advertisement -
- Advertisement -

Sidlaghatta : ಶಿಡ್ಲಘಟ್ಟ : ತಾಲ್ಲೂಕಿನ ಜಂಗಮಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗಾಗಿ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳೀಯ ರೈತರಿಂದ ಪ್ರಬಲ ವಿರೋಧ ವ್ಯಕ್ತವಾಗುತ್ತಿದೆ.

ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಮೀಪವಿರುವ ತಾಲ್ಲೂಕಿನ ಜಂಗಮಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ 2283 ಎಕರೆ ಪ್ರದೇಶದಲ್ಲಿ ಕೈಗಾರಿಕೆಗಾಗಿ ಭೂ ಸ್ವಾಧೀನ ಪ್ರಕ್ರಿಯೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು ಇದನ್ನು ಸ್ಥಳೀಯ ರೈತರು ತೀವ್ರವಾಗಿ ವಿರೋಧಿಸುತ್ತಿದ್ದಾರೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಈಗಾಗಲೇ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಜೊತೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆಯನ್ನು ಸಹ ನಡೆಸಿದ್ದಾರೆ.

ಈ ಮಧ್ಯೆ ಶಿಡ್ಲಘಟ್ಟ ತಾಲ್ಲೂಕಿನ ನಡಿಪಿನಾಯಕನಹಳ್ಳಿ ಗ್ರಾಮದ ರೈತರು ತಮ್ಮ ತೋಟಗಳಿಗೆ ಮಾಧ್ಯಮದವರನ್ನು ಆಹ್ವಾನಿಸಿ ಇದು ಫಲವತ್ತಾದ ಭೂಮಿ, ಮರುಭೂಮಿಯಲ್ಲ, ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲಿಗೆ ಭೇಟಿ ನೀಡಿ ವಾಸ್ತವಾಂಶವನ್ನು ತಿಳಿದು ರೈತರ ಪರವಾಗಿ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ರೈತರು ಮನವಿ ಮಾಡಿದರು.

ನಾವು ನಮ್ಮ ಪಿತ್ರಾರ್ಜಿತ ಆಸ್ತಿಯನ್ನು ಹೊಂದಿ ಅನುಭವದಲ್ಲಿದ್ದೇವೆ. ಯಾವುದೇ ರೀತಿಯ ಸರ್ಕಾರದಿಂದ ಸಾಗುವಳಿ ಚೀಟಿಯನ್ನು ಅಥವಾ ಜಮೀನು ಮಂಜೂರಾತಿ ಮಾಡಿಕೊಂಡಿಲ್ಲ. ಕಂದಾಯ ದಾಖಲೆಗಳನ್ನು ಪರಿಶೀಲಿಸಲಿ ನಮಗೆ ಇರುವುದೊಂದೆ ಆಸರೆ ಇದನ್ನು ಕಿತ್ತುಕೊಳ್ಳುವ ನಿರ್ಧಾರವನ್ನು ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ರಾಜ್ಯ ಸರ್ಕಾರ ರೈತರಿಗೆ ಸಹಕಾರ ನೀಡಬೇಕೆಂದು ಒತ್ತಾಯಿಸಿದರು.

ಜಂಗಮಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ವ್ಯಾಪಕವಾಗಿ ರೇಷ್ಮೆ ಕೃಷಿಯನ್ನು ನೆಚ್ಚಿಕೊಂಡು ಜೀವನ ನಡೆಸುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ಈ ಭಾಗದಲ್ಲಿ ಕೈಗಾರಿಕೆಗಾಗಿ ಭೂಸ್ವಾಧೀನ ಮಾಡಿಕೊಂಡರೆ ರೇಷ್ಮೆ ಕೃಷಿ ನೆಲಕಚ್ಚುತ್ತದೆ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರ ರೈತರ ಜಮೀನು ಸ್ವಾಧೀನ ಮಾಡಿಕೊಂಡು ಉದ್ಯೋಗ ನೀಡುತ್ತೇವೆ ಎಂದು ಭರವಸೆ ನೀಡುತ್ತಿದ್ದಾರೆ. ನಾವು ನಮ್ಮ ಪ್ರಾಣವನ್ನಾದರೂ ಬಿಡ್ತೇವೆ, ಯಾವುದೇ ಕಾರಣಕ್ಕೂ ಫಲವತ್ತಾದ ಕೃಷಿ ಭೂಮಿಯನ್ನು ನೀಡುವುದಿಲ್ಲ ಎಂದು ಎಚ್ಚರಿಸಿದ ರೈತರು ನಾವೇ ನಮ್ಮ ಭೂಮಿಯಲ್ಲಿ ಚಿನ್ನದಂತಹ ಬೆಳೆಯನ್ನು ಬೆಳೆದು ಸರ್ಕಾರಕ್ಕೆ ನೀಡುತ್ತೇವೆ ಜೊತೆಗೆ ಉದ್ಯೋಗ ಸಹ ನಾವೇ ಸೃಷ್ಟಿಸುತ್ತವೆ ಎಂದು ಸವಾಲೆಸೆದರು.

ಈ ಸಂದರ್ಭದಲ್ಲಿ ಗ್ರಾಮದ ರೈತರಾದ ಎನ್.ಎಂ.ಅಜಿತ್‌ಕುಮಾರ್, ದೇವರಾಜ್, ಬೈರೇಗೌಡ, ಶಾಂತಕುಮಾರ್, ಪಿಳ್ಳೇಗೌಡ, ನಾಗರಾಜ್, ಅಶ್ವತ್ಥಪ್ಪ, ಸೋಮಣ್ಣ, ರಮೇಶ್, ಮುನಿರೆಡ್ಡಿ, ಕೆಂಪರೆಡ್ಡಿ, ಮಂಜುನಾಥ್, ಅಮರನಾಥ್ ಹಾಜರಿದ್ದರು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!