Sidlaghatta : ಶಿಡ್ಲಘಟ್ಟ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಕ್ಷರ ಜ್ಯೋತಿ ಯಾತ್ರೆ ಕಾರ್ಯಕ್ರಮ ನಡೆಯಿತು.
ಕಲ್ಯಾಣ ಕರ್ನಾಟಕ ಪ್ರತಿಷ್ಠಾನ ಬೀದರ್ ರವರು “ಕರ್ನಾಟಕ” ಎಂದು ನಾಮಕರಣಗೊಂಡು 50 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ರಾಜ್ಯದಾದ್ಯಂತ 63 ದಿನಗಳ ಕಾಲ ಪ್ರವಾಸ ಮಾಡುತ್ತಿದ್ದಾರೆ. ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕನ್ನಡ ನೆಲಜಲ ಸಂಸ್ಕೃತಿ ಬಗ್ಗೆ ಅರಿವು ಮೂಡಿಸುವುದು ಹಾಗೂ ಉತ್ತಮ ಫಲಿತಾಂಶವನ್ನು ಪಡೆಯಲು ಮಾರ್ಗದರ್ಶನ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ಬೀದರ್ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷರಾದ ಬಸವ ಕುಮಾರ್ ಪಾಟೀಲ್ ಮಾತನಾಡಿ, ಭವಿಷ್ಯದ ಬೆಳಕಾಗಿರುವ ವಿದ್ಯಾರ್ಥಿಗಳು ಜ್ಞಾನಾರ್ಜನೆ ಜೊತೆಗೆ ದೇಶಾಭಿಮಾನವನ್ನು ಬೆಳೆಸಿಕೊಳ್ಳಬೇಕು. ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬೇಕು. ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಬೆಳಗುವ ಹಾಗೂ ಹಿರಿಮೆಯನ್ನು ಸಾರುವ ಭವಿಷ್ಯದ ಕಣ್ಮಣಿಗಳಾಗಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಪಂಡಿತ ಬಾಳೂರೆ, ಪ್ರಭಾರಿ ಪ್ರಾಂಶುಪಾಲ ವೆಂಕಟಶಿವಾರೆಡ್ಡಿ, ರಾಜ್ಯಶಾಸ್ತ್ರದ ಉಪನ್ಯಾಸಕ ಹಾಗೂ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಚ್.ಸಿ.ಮುನಿರಾಜು, ಬಿಜ್ಜವಾರ ಸುಬ್ರಮಣಿ, ಲಕ್ಷ್ಮಯ್ಯ, ಶ್ರೀ ಕೃಷ್ಣ ಪರಮಾತ್ಮ, ಬಾಬಾ ಜಾನ್, ಅತಿಥಿ ಉಪನ್ಯಾಸರಾದ ನಾಗಾರ್ಜುನ ,ರಮೇಶ್, ಶ್ರೀಧರ್ ,ಚಂದ್ರು ಹಾಜರಿದ್ದರು.